ಸುಪ್ರೀಂ ಕೋರ್ಟ್ 
ದೇಶ

'Arvind Kejriwal ಬಂಧನ ಕಾನೂನಾತ್ಮಕ, ಆದರೆ..': ಜಾಮೀನು ತೀರ್ಪು ವೇಳೆ Supreme Court ಮಹತ್ವದ ಹೇಳಿಕೆ!

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ನವದೆಹಲಿ: ಅರವಿಂದ್ ಕೇಜ್ರಿವಾಲ್ ರದ್ದು ಕಾನೂನಾತ್ಮಕ ಬಂಧನವೇ ಆದರೂ ಸುದೀರ್ಘ ಸೆರೆವಾಸವು ಸ್ವಾತಂತ್ರ್ಯದ ಹರಣಕ್ಕೆ ಸಮಾನವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹಾಗೂ ಉಜ್ವಲ್ ಭುಯಾನ್ ಅವರ ನೇತೃತ್ವದ ಪೀಠವು ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ತೀರ್ಪು ಪ್ರಕಟಿಸಿದೆ. 10 ಲಕ್ಷ ರೂ ಜಾಮೀನು ಬಾಂಡ್ ಮತ್ತು ಇಬ್ಬರು ಶ್ಯೂರಿಟಿಗಳ ಆಧಾರದಲ್ಲಿ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಸುದೀರ್ಘ ಸೆರೆವಾಸವು ಸ್ವಾತಂತ್ರ್ಯದ ಹರಣಕ್ಕೆ ಸಮಾನ

ಜಾಮೀನು ತೀರ್ಪಿನ ವೇಳೆ ಸುಪ್ರೀಂ ಕೋರ್ಟ್ ಹಲವು ಗಮನಾರ್ಹ ಅಂಶಗಳನ್ನು ಎತ್ತಿದ್ದು, ಪ್ರಮುಖವಾಗಿ 'ಸುದೀರ್ಘ ಸೆರೆವಾಸವು ಸ್ವಾತಂತ್ರ್ಯದ ಹರಣಕ್ಕೆ ಸಮಾನವಾಗಿದೆ. ಸಿಬಿಐ ಪ್ರಕರಣದಲ್ಲಿ ಮತ್ತಷ್ಟು ಬಂಧನ ಸಂಪೂರ್ಣ ಅಸಮರ್ಥನೀಯ ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ. ಅಲ್ಲದೆ ಜಾಮೀನು ನಿಯಮ ಮತ್ತು ಜೈಲು ಒಂದು ಅಪವಾದ. ವಿಚಾರಣೆಯ ಪ್ರಕ್ರಿಯೆ ಅಥವಾ ಬಂಧನಕ್ಕೆ ಕಾರಣವಾಗುವ ಹಂತಗಳು ಕಿರುಕುಳವಾಗಬಾರದು. ಸಿಬಿಐ ಬಂಧನವು ನ್ಯಾಯಸಮ್ಮತವಲ್ಲ, ಹೀಗಾಗಿ ಕೇಜ್ರಿವಾಲ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

"ಮಾರ್ಚ್ 2023 ರಲ್ಲಿ ಕೇಜ್ರಿವಾಲ್ ರನ್ನು ವಿಚಾರಣೆಗೆ ಒಳಪಡಿಸಿದರೂ ಸಿಬಿಐ ಅವರನ್ನು ಬಂಧಿಸಿರಲಿಲ್ಲ. ಇಡಿ ಬಂಧನವನ್ನು ತಡೆಹಿಡಿದ ನಂತರವೇ ಸಿಬಿಐ ಸಕ್ರಿಯವಾಯಿತು. ಬಳಿಕವಷ್ಟೇ ಸಿಬಿಐ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಕೋರಿತು. 22 ತಿಂಗಳಿಗೂ ಹೆಚ್ಚು ಕಾಲ ಸಿಬಿಐನ ಇಂತಹ ಕ್ರಮವು ಬಂಧನದ ಸಮಯದ ಬಗ್ಗೆ ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕಿದೆ. ಸಿಬಿಐನಿಂದ ಅಂತಹ ಬಂಧನವು ಇಡಿ ಪ್ರಕರಣದಲ್ಲಿ ನೀಡಲಾದ ಜಾಮೀನನ್ನು ಹತಾಶೆಗೊಳಿಸುವುದಾಗಿದೆ ಎಂದು ನ್ಯಾಯಮೂರ್ತಿ ಭುಯಾನ್ ಅಭಿಪ್ರಾಯಪಟ್ಟಿದ್ದಾರೆ.

ಇದೇ ಅಭಿಪ್ರಾಯವನ್ನು ಪುನರುಚ್ಛರಿಸಿದ ಪೀಠದ ಮತ್ತೋರ್ವ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41ಎ (3) ಯಾವುದೇ ಉಲ್ಲಂಘನೆಯಾಗಿಲ್ಲ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT