ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ 
ದೇಶ

ಕೇಜ್ರಿವಾಲ್‌ಗೆ ಜಾಮೀನು; 'ಸತ್ಯಕ್ಕೆ ಸಂದ ಜಯ' ಎಂದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಇದೇ ವಿಚಾರವಾಗಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ.

ರಾಂಚಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಸಿಕ್ಕಿರುವುದುಕ್ಕೆ ಸಂತಸ ವ್ಯಕ್ತಪಡಿಸಿರುವ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಇದು ಸತ್ಯಕ್ಕೆ ಸಂದ ಜಯ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಇದೇ ವಿಚಾರವಾಗಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಹೇಮಂತ್ ಸೊರೇನ್, 'ಹಿರಿಯ ಸಹೋದರ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರ್ಖಂಡ್ ಪ್ರಜೆಗಳಿಂದ ಅಭಿನಂದನೆಗಳು. ಇದು ಸತ್ಯದ ಗೆಲುವು ಮತ್ತು ಸುಳ್ಳಿನ ಸೋಲು. ಇಂದು, ಸುಳ್ಳು ಮತ್ತು ಪಿತೂರಿಯನ್ನು ಸೋಲಿಸುವ ಮೂಲಕ ಸತ್ಯ ಗೆದ್ದಿದೆ ಎಂದು ಹೇಮಂತ್ ಸೊರೇನ್ ಬಣ್ಣಿಸಿದ್ದಾರೆ.

ಇದಕ್ಕೂ ಮುನ್ನ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್