ದೇಶ

ಪ್ರಧಾನಿ ಹುದ್ದೆಯ ಆಫರ್ ನಿರಾಕರಿಸಿದ್ದೇನೆ, ಅದು ನನ್ನ ಜೀವನದ ಗುರಿಯಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನನಗೆ ಒಂದು ಘಟನೆ ನೆನಪಿದೆ. ನಾನು ಯಾರನ್ನೂ ಹೆಸರಿಸುವುದಿಲ್ಲ. ನೀವು ಪ್ರಧಾನಿ ಹುದ್ದೆಯ ರೇಸ್ ಗೆ ಇಳಿದರೆ ಬೆಂಬಲಿಸುವುದಾಗಿ ಆ ವ್ಯಕ್ತಿ ಹೇಳಿದ್ದರು.

ನಾಗಪುರ: ನಾನು ಪ್ರಧಾನಿ ಹುದ್ದೆಯ ರೇಸ್‌ಗೆ ಇಳಿದರೆ ಬೆಂಬಲಿಸುವುದಾಗಿ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ಭರವಸೆ ನೀಡಿದ್ದರು. ಆದರೆ, ಅದು ನನ್ನ ಮಹತ್ವಾಕಾಂಕ್ಷೆ ಅಲ್ಲ ಎಂದು ಹೇಳಿ ಆ ಆಫರ್ ತಿರಸ್ಕರಿಸಿದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ನಿತಿನ್ ಗಡ್ಕರಿ, "ನನಗೆ ಒಂದು ಘಟನೆ ನೆನಪಿದೆ. ನಾನು ಯಾರನ್ನೂ ಹೆಸರಿಸುವುದಿಲ್ಲ. ನೀವು ಪ್ರಧಾನಿ ಹುದ್ದೆಯ ರೇಸ್ ಗೆ ಇಳಿದರೆ ಬೆಂಬಲಿಸುವುದಾಗಿ ಆ ವ್ಯಕ್ತಿ ಹೇಳಿದ್ದರು. ಆದರೆ, ನೀವು ನನ್ನನ್ನು ಏಕೆ ಬೆಂಬಲಿಸಬೇಕು ಮತ್ತು ನಾನು ನಿಮ್ಮ ಬೆಂಬಲವನ್ನು ಏಕೆ ತೆಗೆದುಕೊಳ್ಳಬೇಕು ಎಂದು ನಾನು ಅವರನ್ನೇ ಪ್ರಶ್ನಿಸಿದೆ ಎಂದರು.

ಪ್ರಧಾನಿಯಾಗುವುದು ನನ್ನ ಜೀವನದ ಗುರಿಯಲ್ಲ. ನಾನು ನನ್ನ ನಂಬಿಕೆ ಮತ್ತು ಸಂಘಟನೆಗೆ ನಿಷ್ಠನಾಗಿದ್ದೇನೆ. ಯಾವುದೇ ಹುದ್ದೆಗೆ ರಾಜಿ ಮಾಡಿಕೊಳ್ಳಲು ಹೋಗುವುದಿಲ್ಲ. ನನ್ನ ನಂಬಿಕೆ ನನ್ನಗೆ ಅತಿ ಮುಖ್ಯ ಎಂದು ಹೇಳಿದ್ದಾಗಿ ತಿಳಿಸಿದರು. ಆದರೆ ಯಾವ ಸಂದರ್ಭದಲ್ಲಿ ಮಾತುಕತೆ ನಡೆಯಿತು ಎಂಬುದನ್ನು ನಿರ್ದಿಷ್ಟವಾಗಿ ಹೇಳಲಿಲ್ಲ.

ಪತ್ರಿಕೋದ್ಯಮ ಮತ್ತು ರಾಜಕೀಯ ಎರಡರಲ್ಲೂ ನೈತಿಕತೆಯ ಮಹತ್ವವನ್ನು ಒತ್ತಿ ಹೇಳಿದ ಗಡ್ಕರಿ, ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಮತ್ತು ಮಾಧ್ಯಮಗಳು ನೈತಿಕತೆಯನ್ನು ಅನುಸರಿಸಿದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!