ಸಾಂದರ್ಭಿಕ ಚಿತ್ರ  
ದೇಶ

NDA ಸರ್ಕಾರದ ಪ್ರಸ್ತುತ ಅವಧಿಯಲ್ಲಿಯೇ 'ಒಂದು ರಾಷ್ಟ್ರ, ಒಂದು ಚುನಾವಣೆ' ಜಾರಿ ವಿಶ್ವಾಸ: ಖಚಿತ ಮೂಲಗಳು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ-3ನೇ ಅವಧಿಯ ಸರ್ಕಾರ 100 ದಿನಗಳು ಪೂರ್ಣಗೊಳಿಸಿದ್ದು, ಆಡಳಿತಾರೂಢ ಮೈತ್ರಿಕೂಟದ ಒಗ್ಗಟ್ಟು ಇನ್ನು ಉಳಿದ ಅಧಿಕಾರಾವಧಿಯವರೆಗೆ ಮುಂದುವರಿಯುತ್ತದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ತನ್ನ ಪ್ರಸ್ತುತ ಅಧಿಕಾರಾವಧಿಯಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ'ಯನ್ನು ಜಾರಿಗೆ ತರಲಿದೆ ಎಂದು ಮೂಲಗಳು ತಿಳಿಸಿದ್ದು, ದೇಶದ ಸುಧಾರಣಾ ಕ್ರಮ ಇದಾಗಿದ್ದು, ಪಕ್ಷಾತೀತವಾಗಿ ಬೆಂಬಲ ಸಿಗುತ್ತದೆ ಎಂಬ ವಿಶ್ವಾಸ ಹೊಂದಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ-3ನೇ ಅವಧಿಯ ಸರ್ಕಾರ 100 ದಿನಗಳು ಪೂರ್ಣಗೊಳಿಸಿದ್ದು, ಆಡಳಿತಾರೂಢ ಮೈತ್ರಿಕೂಟದ ಒಗ್ಗಟ್ಟು ಇನ್ನು ಉಳಿದ ಅಧಿಕಾರಾವಧಿಯವರೆಗೆ ಮುಂದುವರಿಯುತ್ತದೆ ಎಂದು ಮೂಲಗಳು ತಿಳಿಸಿವೆ.

ಖಂಡಿತವಾಗಿಯೂ ಒಂದು ರಾಷ್ಟ್ರ, ಒಂದು ಚುನಾವಣೆ ಈ ಅಧಿಕಾರಾವಧಿಯಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ ಎಂದು ಒಂದು ಮೂಲವು ಅನಾಮಧೇಯತೆಯ ಷರತ್ತಿನ ಮೇಲೆ ಹೇಳಿದೆ.

ಕಳೆದ ತಿಂಗಳು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿಯವರು 'ಒಂದು ರಾಷ್ಟ್ರ, ಒಂದು ಚುನಾವಣೆ'ಯನ್ನು ಪ್ರತಿಪಾದಿಸಿದ್ದರು. ಆಗಾಗ್ಗೆ ಚುನಾವಣೆಗಳು ನಡೆಯುತ್ತಿದ್ದರೆ ದೇಶದ ಪ್ರಗತಿಯಲ್ಲಿ ಅಡಚಣೆಗಳನ್ನು ಉಂಟಾಗುತ್ತವೆ ಎಂದಿದ್ದರು.

'ಒಂದು ರಾಷ್ಟ್ರ, ಒಂದು ಚುನಾವಣೆ'ಗಾಗಿ ರಾಷ್ಟ್ರವು ಮುಂದೆ ಬರಬೇಕಿದೆ,'' ಎಂದು ಪ್ರಧಾನಿ ಮೋದಿ ಕೆಂಪುಕೋಟೆಯ ಮೇಲೆ ಭಾಷಣದಲ್ಲಿ ಹೇಳಿದ್ದರು.

ರಾಷ್ಟ್ರೀಯ ಸಂಪನ್ಮೂಲಗಳು ಜನಸಾಮಾನ್ಯರಿಗೆ ಬಳಕೆಯಾಗುವಂತೆ ಪಕ್ಷಗಳನ್ನು ಕೋರಿದ ಅವರು, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕನಸನ್ನು ನನಸಾಗಿಸಲು ನಾವು ಮುಂದಾಗಬೇಕು ಎಂದಿದ್ದರು. 'ಒಂದು ರಾಷ್ಟ್ರ, ಒಂದು ಚುನಾವಣೆ' ಎಂಬುದು ಬಿಜೆಪಿ ತನ್ನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ ಪ್ರಮುಖ ಭರವಸೆಗಳಲ್ಲಿ ಒಂದಾಗಿದೆ.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಈ ವರ್ಷದ ಮಾರ್ಚ್‌ನಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಮೊದಲ ಹಂತವಾಗಿ ಶಿಫಾರಸು ಮಾಡಿತು. ಪ್ರತ್ಯೇಕವಾಗಿ, ಕಾನೂನು ಆಯೋಗವು 2029 ರಿಂದ ಪ್ರಾರಂಭವಾಗುವ ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಪುರಸಭೆಗಳು ಮತ್ತು ಪಂಚಾಯತ್‌ಗಳಂತಹ ಸ್ಥಳೀಯ ಸಂಸ್ಥೆಗಳಿಗೆ ಎಲ್ಲಾ ಮೂರು ಹಂತದ ಸರ್ಕಾರಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಶಿಫಾರಸು ಮಾಡುವ ಸಾಧ್ಯತೆಯಿದೆ.

ಸಮಿತಿಯು 18 ಸಾಂವಿಧಾನಿಕ ತಿದ್ದುಪಡಿಗಳನ್ನು ಶಿಫಾರಸು ಮಾಡಿದೆ, ಇವುಗಳಲ್ಲಿ ಹಲವು ರಾಜ್ಯ ಸರ್ಕಾರಗಳು ಒಲವು ಹೊಂದಿಲ್ಲ. ಇದನ್ನು ಜಾರಿಗೆ ತರಬೇಕಾದರೆ ಇವುಗಳಿಗೆ ಕೆಲವು ಸಂವಿಧಾನ ತಿದ್ದುಪಡಿ ಮಸೂದೆಗಳು ಬೇಕಾಗುತ್ತವೆ ಅದನ್ನು ಸಂಸತ್ತಿನಲ್ಲಿ ಅಂಗೀಕರಿಸಬೇಕಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT