ವಿಕೆ ಸಕ್ಸೇನಾ - ಅರವಿಂದ್ ಕೇಜ್ರಿವಾಲ್‌  
ದೇಶ

ನಾಳೆ ಸಂಜೆ 4:30ಕ್ಕೆ ಕೇಜ್ರಿವಾಲ್ ರಿಂದ ದೆಹಲಿ ಲೆಫ್ಟಿನೆಂಟ್ ಗವರ್ನರ್ ಭೇಟಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ

ನಾಳೆ ಸಂಜೆ 4:30ಕ್ಕೆ ತಮ್ಮನ್ನು ಭೇಟಿ ಮಾಡಲು ವಿಕೆ ಸಕ್ಸೇನಾ ಅವರು ಕೇಜ್ರಿವಾಲ್‌ ಅವರಿಗೆ ಅಪಾಯಿಂಟ್‌ಮೆಂಟ್ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಆರು ತಿಂಗಳು ಜೈಲುವಾಸ ಮುಗಿಸಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿ ಮಾಡಲಿದ್ದು, ಈ ವೇಳೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

ನಾಳೆ ಸಂಜೆ 4:30ಕ್ಕೆ ತಮ್ಮನ್ನು ಭೇಟಿ ಮಾಡಲು ವಿಕೆ ಸಕ್ಸೇನಾ ಅವರು ಕೇಜ್ರಿವಾಲ್‌ ಅವರಿಗೆ ಅಪಾಯಿಂಟ್‌ಮೆಂಟ್ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿ ಮಾಡಲು ಕೇಜ್ರಿವಾಲ್ ಸಮಯ ಕೋರಿದ್ದಾರೆ ಮತ್ತು ಅವರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಎಎಪಿ ಈ ಹಿಂದೆ ಹೇಳಿತ್ತು.

"ನಾವು ಪ್ರಾಮಾಣಿಕರು ಎಂದು ಜನರು ಹೇಳಿದಾಗ ಮಾತ್ರ" ತಾವು ಮತ್ತೆ ಮುಖ್ಯಮಂತ್ರಿಯಾಗುವುದಾಗಿ ಮತ್ತು ಮನೀಶ್ ಸಿಸೋಡಿಯಾ ಅವರು ಉಪ ಮುಖ್ಯಮಂತ್ರಿಯಾಗುತ್ತಾರೆ ಎಂದು ಎಎಪಿ ಮುಖ್ಯಸ್ಥರು ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾದ ಕೆಲವು ದಿನಗಳಲ್ಲಿ ಎಎಪಿ ರಾಷ್ಟ್ರೀಯ ಸಂಚಾಲಕ ಭಾನುವಾರ 48 ಗಂಟೆಗಳ ಒಳಗೆ ರಾಜೀನಾಮೆ ನೀಡುವುದಾಗಿ ಮತ್ತು ದೆಹಲಿಯಲ್ಲಿ ಶೀಘ್ರ ಚುನಾವಣೆ ನಡೆಸಬೇಕು ಎಂದು ಕೋರಿದ್ದರು.

ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಶಪಥ ಕೇಜ್ರಿವಾಲ್ ಮಾಡಿದ್ದರು ಮತ್ತು

ಒಂದೆರಡು ದಿನಗಳಲ್ಲಿ ಎಎಪಿ ಶಾಸಕರ ಸಭೆ ನಡೆಸಿ ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ