ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಟ್ರಕ್ ಹರಿದು ಒಂದೇ ಕುಟುಂಬದ ನಾಲ್ವರು ಸಾವು, 5 ಮಂದಿಗೆ ಗಾಯ

ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ಅಪಘಾತದಲ್ಲಿ ಆತನಿಗೂ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಭಾಲ್: ಟ್ರಕ್ ಹರಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಸಂಬಾಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಅಲಿಗಢಕ್ಕೆ ಕಳುಹಿಸಲಾಗಿದೆ.

ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ಅಪಘಾತದಲ್ಲಿ ಆತನಿಗೂ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ಭೋಪತ್‌ಪುರ ಗ್ರಾಮದ ಕೆಲವರು ರಸ್ತೆ ಬದಿ ಕುಳಿತಿದ್ದಾಗ ಅತಿ ವೇಗದಲ್ಲಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಗಾಯಾಳುಗಳನ್ನು ತಕ್ಷಣವೇ ರಾಜಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಲಿಘಡಕ್ಕೆ ಕಳುಹಿಸಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಕ್ರಿಶನ್ ಕುಮಾರ್ ತಿಳಿಸಿದ್ದಾರೆ.

ಅಪಘಾತಕ್ಕೆ ಒಳಗಾದ ಎಲ್ಲಾ ಒಂಬತ್ತು ಜನರು ಒಂದೇ ಕುಟುಂಬದವರಾಗಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಸಿಂಗ್ ಪೆನ್ಸಿಯಾ, ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಾಲಕನಿಗೆ ನಿದ್ದೆ ಬಂದಿರಬಹುದು. ಇದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ