ಕೇಜ್ರಿವಾಲ್ 
ದೇಶ

ಮುಂದಿನ ದೆಹಲಿ ಸಿಎಂ ವದಂತಿ ನಡುವೆ ಸಿಸೋಡಿಯಾ-ಕೇಜ್ರಿವಾಲ್ ಭೇಟಿ!

ಕೇಜ್ರಿವಾಲ್ ಮತ್ತು ಸಿಸೋಡಿಯಾ ಇಂದು ಭೇಟಿಯಾಗಲಿದ್ದಾರೆ. ಪಕ್ಷದ ವರಿಷ್ಠರ ನಿರ್ಧಾರದ ನಂತರ ಇದು ಮೊದಲ ಸಭೆಯಾಗಿದೆ. ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಘೋಷಿಸಿದ ಬಳಿಕ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಮುಂದಿನ ಮುಖ್ಯಮಂತ್ರಿ ಎಂಬ ವದಂತಿಗಳು ಹರಿದಾಡುತ್ತಿದೆ. ಈ ಮಧ್ಯೆ ಸಿಸೋಡಿಯಾ ಇಂದು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲಿದ್ದು, ಇವರಿಬ್ಬರ ನಡುವಿನ ಸಭೆ ತೀವ್ರ ಕುತೂಹಲ ಮೂಡಿಸಿದೆ.

ಈ ಕುರಿತು ಪಕ್ಷದ ಪದಾಧಿಕಾರಿಯೊಬ್ಬರು ಅಧಿಕೃತ ಮಾಹಿತಿ ನೀಡಿದ್ದು, ಕೇಜ್ರಿವಾಲ್ ಮತ್ತು ಸಿಸೋಡಿಯಾ ಇಂದು ಭೇಟಿಯಾಗಲಿದ್ದಾರೆ. ಪಕ್ಷದ ವರಿಷ್ಠರ ನಿರ್ಧಾರದ ನಂತರ ಇದು ಮೊದಲ ಸಭೆಯಾಗಿದೆ. ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಿದರು. ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸಭೆ ನಡೆಯಲಿದೆ.

ಅಬಕಾರಿ ನೀತಿ ಪ್ರಕರಣದಲ್ಲಿ ಶುಕ್ರವಾರ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕೇಜ್ರಿವಾಲ್, ಒಂದೆರಡು ದಿನಗಳಲ್ಲಿ ಎಎಪಿ ಶಾಸಕರ ಸಭೆ ನಡೆಸಲಿದ್ದು, ತಮ್ಮ ಪಕ್ಷದ ಸಹೋದ್ಯೋಗಿಯೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಅವರ ಹಠಾತ್ ರಾಜೀನಾಮೆ ಘೋಷಣೆಯಿಂದಾಗಿ ಅವರ ಪತ್ನಿ ಸುನೀತಾ, ಸಚಿವರಾದ ಅತಿಶಿ ಮತ್ತು ಗೋಪಾಲ್ ರೈ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬಂತಹ ಮಾತುಗಳು ಕೂಡಾ ಕೇಳಿಬರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!