ಕೇಂದ್ರ ಗೃಹ ಸಚಿವ ಅಮಿತ್ ಶಾ 
ದೇಶ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತೆ ಮೇಲೇಳದಂತೆ ಮಟ್ಟ; ಪುನಃ ಆರಂಭಿಸುವ ಧೈರ್ಯ ಯಾರಿಗೂ ಇಲ್ಲ: ಅಮಿತ್ ಶಾ

ಇದು ಎರಡು ಶಕ್ತಿಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಮತ್ತು ಇನ್ನೊಂದು ಕಡೆ ಬಿಜೆಪಿ ಇದೆ. ಎನ್‌ಸಿ-ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ ಎಂದು ಹೇಳುತ್ತಿವೆ.

ಗುಲಾಬ್ ಗರ್: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಮತ್ತೆ ಹೆಚ್ಚಿಸುವ ಪ್ರಯತ್ನಗಳು ನಡೆಯುತ್ತಿವೆ. ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನೆ ಮತ್ತೆ ಮೇಲೇಳದಂತೆ ಮಟ್ಟ ಹಾಕಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕಿಶ್ತ್‌ವಾರ್‌ನಲ್ಲಿ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಸಾಧ್ಯವಾಗುವುದಿಲ್ಲ ಎಂದರು.

ಮತ್ತೆ ಮೇಲೇಳದ ಹಂತಕ್ಕೆ ಭಯೋತ್ಪಾದನೆಯನ್ನು ನಾವು ಮಟ್ಟ ಹಾಕುತ್ತೇವೆ. ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಯೋತ್ಪಾದಕರನ್ನು ಬಿಡುಗಡೆ ಮಾಡುವ ಪ್ರಸ್ತಾಪದ ಬಗ್ಗೆ ಮಾತುಗಳು ಕೇಳಿಬರುತ್ತಿದ್ದು, ಭಯೋತ್ಪಾದನೆಯನ್ನು ಮತ್ತೆ ಆರಂಭಿಸುವ ಪ್ರಯತ್ನಗಳು ನಡೆಯುತ್ತಿವೆ. ಈಗ ಇರುವುದು ಇದು ಮೋದಿ ಸರ್ಕಾರ .ಹೀಗಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಪುನ: ಆರಂಭಿಸುವ ಧೈರ್ಯ ಯಾರಿಗೂ ಇಲ್ಲ ಎಂದು ಬಿಜೆಪಿಯ ಅಭ್ಯರ್ಥಿ ಮತ್ತು ಮಾಜಿ ಸಚಿವ ಸುನಿಲ್ ಶರ್ಮಾ ಪರ ಪ್ರಚಾರದಲ್ಲಿ ಅಮಿತ್ ಶಾ ಹೇಳಿದರು.

ಇದು ಎರಡು ಶಕ್ತಿಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಮತ್ತು ಇನ್ನೊಂದು ಕಡೆ ಬಿಜೆಪಿ ಇದೆ. ಎನ್‌ಸಿ-ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ ಎಂದು ಹೇಳುತ್ತಿವೆ. ಅದನ್ನು ಮರುಸ್ಥಾಪಿಸಬೇಕೇ? ಹೇಳಿ ಎಂದು ಜನರನ್ನು ಕೇಳಿದ ಅಮಿತ್ ಶಾ, ಪಹಾರಿಗಳು ಮತ್ತು ಗುಜ್ಜರ್‌ ಮತ್ತಿತರಿಗೆ ಬಿಜೆಪಿ ನೀಡಿರುವ ಮೀಸಲಾತಿಯನ್ನು ಕಸಿದುಕೊಳ್ಳಲಾಗುತ್ತದೆ ಎಂದರು.

ಆದರೆ, ಚಿಂತಿಸಬೇಡಿ, ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ಗಮನಿಸುತ್ತಿದ್ದೇನೆ ಮತ್ತು ಅಬ್ದುಲ್ಲಾ ಆಗಲಿ, ರಾಹುಲ್ ಆಗಲಿ ಇಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಭರವಸೆ ನೀಡುತ್ತೇನೆ ಎಂದು ಗೃಹ ಸಚಿವರು ಹೇಳಿದರು. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಗೃಹ ಸಚಿವರ 2ನೇ ಭೇಟಿ ಇದಾಗಿದೆ.

ಇದಕ್ಕೂ ಮೊದಲು ಸೆಪ್ಟೆಂಬರ್ 6 ಮತ್ತು 7 ರಂದು ಜಮ್ಮುವಿಗೆ ಎರಡು ದಿನಗಳ ಭೇಟಿ ನೀಡಿದ ಅವರು ವಿಧಾನಸಭಾ ಚುನಾವಣೆಯ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದರು. ಸೆಪ್ಟೆಂಬರ್ 18 ರಂದು ಪಡ್ಡರ್-ನಾಗಸೇನಿ ಸೇರಿದಂತೆ 24 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಮೊದಲ ಹಂತದ ಮತದಾನದ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT