ಶಿವಸೇನಾ ಶಾಸಕ ಗಾಯಕ್ವಾಡ್, ರಾಹುಲ್ ಗಾಂಧಿ ಸಾಂದರ್ಭಿಕ ಚಿತ್ರ 
ದೇಶ

ರಾಹುಲ್ ಗಾಂಧಿ ನಾಲಿಗೆ ಕತ್ತರಿಸುವವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನೆ ಶಾಸಕ

ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾಗ ಭಾರತದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಲು ಬಯಸುವುದಾಗಿ ಹೇಳಿದ್ದರು.

ಮುಂಬೈ: ಮೀಸಲಾತಿ ರದ್ದುಪಡಿಸುವ ಕುರಿತು ಹೇಳಿಕೆ ನೀಡಿರುವ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಮಧ್ಯೆ ಗಾಯಕ್ವಾಡ್ ಅವರ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರದಲ್ಲಿ ಬಿಜೆಪಿಯೂ ಮೈತ್ರಿಪಕ್ಷವಾಗಿದೆ.

ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾಗ ಭಾರತದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಲು ಬಯಸುವುದಾಗಿ ಹೇಳಿದ್ದರು. ಇದು ಕಾಂಗ್ರೆಸ್‌ನ ನಿಜವಾದ ಮುಖವನ್ನು ಅನಾವರಣಗೊಳಿಸಿದೆ ಎಂದು ಗಾಯಕ್ವಾಡ್ ವಿಚಿತ್ರ ರೀತಿಯ ಬಹುಮಾನ ಘೋಷಿಸುವ ಮೊದಲು ಸುದ್ದಿಗಾರರಿಗೆ ತಿಳಿಸಿದರು.

ವಿದರ್ಭ ಪ್ರದೇಶದ ಬುಲ್ಧಾನ ವಿಧಾನಸಭಾ ಕ್ಷೇತ್ರದ ಶಾಸಕ ಗಾಯಕ್‌ವಾಡ್‌ಗೆ ವಿವಾದಗಳು ಹೊಸದೇನಲ್ಲ. ಕಳೆದ ತಿಂಗಳು ಪೊಲೀಸರು ಶಿವಸೇನೆ ಶಾಸಕರ ಕಾರನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಂತರ ಕಾರಿನಲ್ಲಿ ಪೊಲೀಸರು ವಾಂತಿ ಮಾಡಿಕೊಂಡ ನಂತರ ಸ್ವಯಂಪ್ರೇರಣೆಯಿಂದ ಸ್ವಚ್ಛಗೊಳಿಸಿದರು ಎಂದು ಗಾಯಕ್ವಾಡ್ ಸಮರ್ಥಿಸಿಕೊಂಡಿದ್ದರು.

1987 ರಲ್ಲಿ ಹುಲಿಯೊಂದನ್ನು ಬೇಟೆಯಾಡಿ ಅದರ ಹಲ್ಲನ್ನು ತನ್ನ ಕುತ್ತಿಗೆಗೆ ಹಾಕಿಕೊಂಡಿರುವುದಾಗಿ ಗಾಯಕ್ವಾಡ್ ಫೆಬ್ರವರಿಯಲ್ಲಿ ಹೇಳಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅದರ ಗುರುತು ಪತ್ತೆ ಹಚ್ಚಲು ಹುಲಿ ಹಲ್ಲನ್ನು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಿತ್ತು. ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಗಾಯಕ್ವಾಡ್ ವಿರುದ್ಧ ಆರೋಪ ಹೊರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT