ಹಳಿ ಮೇಲೆ ಬಿದ್ದ BJP ಶಾಸಕಿ 
ದೇಶ

Itawa: ಒಂದೇ ಭಾರತ್ ರೈಲಿಗೆ ಚಾಲನೆ ವೇಳೆ ಹಳಿ ಮೇಲೆ ಬಿದ್ದ ಶಾಸಕಿ! Video

ಆಗ್ರಾ ಮತ್ತು ವಾರಣಾಸಿ ನಡುವೆ ಆರಂಭವಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇಟಾವಾ ರೈಲು ನಿಲ್ದಾಣವನ್ನು ತಲುಪಿದ್ದು, ಬಿಜೆಪಿ ಮತ್ತು ಎಸ್‌ಪಿ ನಾಯಕರು ತಮ್ಮ ಬೆಂಬಲಿಗರೊಂದಿಗೆ ರೈಲನ್ನು ಸ್ವಾಗತಿಸಿದರು.

ಇಟಾವಾ: ಒಂದೇ ಭಾರತ್ ರೈಲಿಗೆ ಚಾಲನೆ ನೀಡುವ ವೇಳೆ ಬಿಜೆಪಿ ಶಾಸಕಿ ಆಯತಪ್ಪಿ ಹಳಿ ಮೇಲೆ ಬಿದ್ದ ಘಟನೆ ಮಂಗಳವಾರ ಉತ್ತರ ಪ್ರದೇಶದಲ್ಲಿ ನಡೆದಿದೆ.

ಆಗ್ರಾ ಮತ್ತು ವಾರಣಾಸಿ ನಡುವೆ ಆರಂಭವಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇಟಾವಾ ರೈಲು ನಿಲ್ದಾಣವನ್ನು ತಲುಪಿದ್ದು, ಬಿಜೆಪಿ ಮತ್ತು ಎಸ್‌ಪಿ ನಾಯಕರು ತಮ್ಮ ಬೆಂಬಲಿಗರೊಂದಿಗೆ ಅದನ್ನು ರೈಲನ್ನು ಸ್ವಾಗತಿಸಿದರು.

ಈ ವೇಳೆ ನಿಲ್ದಾಣದಲ್ಲಿ ಜನಜಂಗುಳಿ ಹೆಚ್ಚಿದ್ದು, ರೈಲಿಗೆ ಧ್ವಜಾರೋಹಣ ಮಾಡಲು ಮುಖಂಡರ ನಡುವೆ ಹಾಗೂ ಛಾಯಾಚಿತ್ರ ತೆಗೆಯಲು ಬೆಂಬಲಿಗರ ನಡುವೆ ಪೈಪೋಟಿ ಏರ್ಪಟ್ಟಿತ್ತು.

ಈ ವೇಳೆ ನೂಕು-ನುಗ್ಗಲು ಏರ್ಪಟ್ಟಿದ್ದು, ಇದರಿಂದಾಗಿ ಇಟವಾಹ್‌ನ ಬಿಜೆಪಿ ಶಾಸಕ ಸದರ್ ಸರಿತಾ ಬದೌರಿಯಾ ಅವರು ಆಯತಪ್ಪಿ ಪ್ಲಾಟ್‌ಫಾರ್ಮ್‌ನಿಂದ ಕೆಳಗಿನ ರೈಲ್ವೆ ಹಳಿ ಮೇಲೆ ಬಿದ್ದಿದ್ದಾರೆ.

ಶಾಸಕಿ ಸರಿತಾ ಬದೌರಿಯಾ ಅವರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲು, ಇಟಾವಾ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ಗೆ ಆಗಮಿಸಿದ್ದರು. ವಂದೇ ಭಾರತ್ ಧ್ವಜಾರೋಹಣ ಮಾಡಲು ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದರು, ಈ ವೇಳೆ ಗಲಾಟೆ ನಡೆದು ಸರಿತಾ ಬದೌರಿಯಾ ಕಾಲು ಜಾರಿ ರೈಲ್ವೇ ಹಳಿ ಮೇಲೆ ಬಿದ್ದಿದ್ದಾರೆ. ಈ ವೇಳೆ ರೈಲು ಇಟಾವಾ ಪ್ಲಾಟ್‌ಫಾರ್ಮ್ ನಂಬರ್ ಒಂದರಲ್ಲಿ ನಿಂತಿತ್ತು.

ಬಿಜೆಪಿ ಮಹಿಳಾ ಶಾಸಕಿ ಹಳಿ ಮೇಲೆ ಬಿದ್ದ ತಕ್ಷಣ ರೈಲಿನ ಲೋಕೋ ಪೈಲಟ್ ಹಾರ್ನ್ ಊದಿದರು. ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ಇತರ ಮುಖಂಡರು ರೈಲನ್ನು ಮುಂದೆ ಸಾಗದಂತೆ ನಿಲ್ಲಿಸುವಂತೆ ಸೂಚಿಸಿದರು.

ಶಾಸಕಿ ಸರಿತಾ ಬದೌರಿಯಾ ಪ್ಲಾಟ್‌ಫಾರ್ಮ್‌ನಿಂದ ರೈಲ್ವೆ ಹಳಿ ಮೇಲೆ ಬಿದ್ದ ತಕ್ಷಣ ಬಿಜೆಪಿ ಕಾರ್ಯಕರ್ತರು ಅವರನ್ನು ಮೇಲೆತ್ತಲು ಟ್ರಾಕ್ ಮೇಲೆ ಹಾರಿದರು. ತರಾತುರಿಯಲ್ಲಿ ಟ್ರ್ಯಾಕ್‌ನಿಂದ ಎತ್ತಿಕೊಂಡು ಪ್ಲಾಟ್‌ಫಾರ್ಮ್‌ಗೆ ಕರೆದೊಯ್ಯಲಾಯಿತು. ಅದೃಷ್ಟವಶಾತ್ ಶಾಸಕರಿಗೆ ಯಾವುದೇ ಗಾಯಗಳಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT