ಸಂಗ್ರಹ ಚಿತ್ರ 
ದೇಶ

'ಬುಲ್ಡೋಜರ್ ನ್ಯಾಯ'ಕ್ಕೆ ಸುಪ್ರೀಂ ಕೋರ್ಟ್ ತಡೆ: ಅಕ್ಟೋಬರ್ 1ರವರೆಗೆ ಯಾವುದೇ ಕಾರ್ಯಾಚರಣೆ ನಡೆಸದಂತೆ ಖಡಕ್ ಆದೇಶ!

ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಬುಲ್ಡೋಜರ್‌ಗಳ ಧ್ವಂಸ ಕ್ರಮದ ವಿರುದ್ಧ ಜಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಈ ಆದೇಶ ನೀಡಿದೆ.

ನವದೆಹಲಿ: ಬುಲ್ಡೋಜರ್ ಕ್ರಮದ ಕುರಿತಂತೆ ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಖಡಕ್ ಸೂಚನೆ ನೀಡಿದೆ. ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನಿಲ್ಲಿಸಬೇಕು. ಅಲ್ಲದೆ ಕಾನೂನು ಪ್ರಕ್ರಿಯೆಯಂತೆ ಮಾತ್ರ ಅತಿಕ್ರಮಣ ತೆಗೆಯಬೇಕು ಎಂದು ಆದೇಶಿಸಿದೆ.

ನೋಟಿಸ್ ನಂತರವೇ ಅತಿಕ್ರಮಣ ತೆರೆವುಗೊಳಿಸಲು ಬುಲ್ಡೋಜರ್‌ಗಳನ್ನು ಬಳಸಲಾಗುತ್ತಿದೆ ಎಂದು ಸಾಲಿಸಿಟರ್ ಜನರಲ್ ಹೇಳಿದರು. ಈ ಕುರಿತು ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು, ರಸ್ತೆಗಳು, ಬೀದಿಗಳು, ಫುಟ್‌ಪಾತ್‌ಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾದ ಅಕ್ರಮ ನಿರ್ಮಾಣಗಳನ್ನು ಸರಿಯಾದ ಕ್ರಮದಲ್ಲಿ ನೆಲಸಮ ಮಾಡಲು ಅನುಮತಿಸಲಾಗುವುದು ಎಂದರು.

ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಬುಲ್ಡೋಜರ್‌ಗಳ ಧ್ವಂಸ ಕ್ರಮದ ವಿರುದ್ಧ ಜಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಈ ಆದೇಶ ನೀಡಿದೆ. ಅಕ್ಟೋಬರ್ 1ರವರೆಗೆ ದೇಶಾದ್ಯಂತ ಯಾವುದೇ ಕಾರ್ಯಾಚರಣೆ ನಡೆಸದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರ ಪೀಠದ ಮುಂದೆ, ಸಾಲಿಸಿಟರ್ ತುಷಾರ್ ಮೆಹ್ತಾ ಅವರು ಎಲ್ಲೆಲ್ಲಿ ಕೆಡವಲು ಕ್ರಮ ಕೈಗೊಂಡಿದ್ದರೂ, ಅದನ್ನು ಕಾನೂನು ಕಾರ್ಯವಿಧಾನವನ್ನು ಅನುಸರಿಸಿ ಮಾಡಲಾಗಿದೆ ಎಂದು ಹೇಳಿದರು. ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಆರೋಪ ತಪ್ಪು. ಒಂದು ರೀತಿಯಲ್ಲಿ, ತಪ್ಪು ನಿರೂಪಣೆಯನ್ನು ಹರಡಲಾಗುತ್ತಿದೆ ಎಂದು ವಾದಿಸಿದರು.

ಈ ಕುರಿತು ನ್ಯಾಯಮೂರ್ತಿ ಗವಾಯಿ ಅವರು, ಈ ನಿರೂಪಣೆಯಿಂದ ನಾವು ಪ್ರಭಾವಿತರಾಗುತ್ತಿಲ್ಲ. ಅಕ್ರಮ ನಿರ್ಮಾಣಕ್ಕೆ ರಕ್ಷಣೆ ನೀಡುವುದಕ್ಕೆ ನಾವು ಮುಂದಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ಕಾರ್ಯನಿರ್ವಾಹಕ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ಕೆಡವುವ ಪ್ರಕ್ರಿಯೆಯನ್ನು ಸರಳೀಕರಿಸುವ ಅವಶ್ಯಕತೆಯಿದೆ ಎಂದರು.

ನ್ಯಾಯಾಲಯದ ಹೊರಗೆ ಏನೇ ನಡೆದರೂ ಅದು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಮೂರ್ತಿ ವಿಶ್ವನಾಥನ್ ಹೇಳಿದ್ದಾರೆ. ಯಾವುದೇ ನಿರ್ದಿಷ್ಟ ಸಮುದಾಯವನ್ನು ಟಾರ್ಗೆಟ್ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬ ಚರ್ಚೆಗೆ ನಾವು ಹೋಗುವುದಿಲ್ಲ. ಒಂದು ವೇಳೆ ಅಕ್ರಮ ಧ್ವಂಸ ಪ್ರಕರಣವಿದ್ದರೂ ಅದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT