ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: CAF ಯೋಧನಿಂದ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ; ಇಬ್ಬರು ಸಾವು, ಇಬ್ಬರಿಗೆ ಗಾಯ

ಸಿಎಎಫ್‌ನ 11ನೇ ಬೆಟಾಲಿಯನ್‌ನ 'ಬಿ' ಕಂಪನಿಯ ಶಿಬಿರದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ(ಸುರ್ಗುಜಾ ಶ್ರೇಣಿ) ಅಂಕಿತ್ ಗಾರ್ಗ್ ಅವರು ಹೇಳಿದ್ದಾರೆ.

ಬಲರಾಮ್‌ಪುರ: ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯ ಛತ್ತೀಸ್‌ಗಢ ಸಶಸ್ತ್ರ ಪಡೆ(ಸಿಎಎಫ್)ಯ ಶಿಬಿರದಲ್ಲಿ ಬುಧವಾರ ಯೋಧನೊಬ್ಬ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿ ರಾಯ್‌ಪುರದಿಂದ ಸುಮಾರು 400 ಕಿಮೀ ದೂರದಲ್ಲಿರುವ ಸಮ್ರಿ ಪಥ್ ಪೊಲೀಸ್ ಠಾಣಾ ವ್ಯಾಪ್ತಿಯ ಭೂತಾಹಿ ಮೋಡ್ ಪ್ರದೇಶದಲ್ಲಿ ಸಿಎಎಫ್‌ನ 11ನೇ ಬೆಟಾಲಿಯನ್‌ನ 'ಬಿ' ಕಂಪನಿಯ ಶಿಬಿರದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ(ಸುರ್ಗುಜಾ ಶ್ರೇಣಿ) ಅಂಕಿತ್ ಗಾರ್ಗ್ ಅವರು ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾನ್‌ಸ್ಟೆಬಲ್ ಅಜಯ್ ಸಿದರ್ ತನ್ನ ಸರ್ವಿಸ್ ರಿವಾಲ್ವರ್ ನಿಂದ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆಯಲ್ಲಿ ಕಾನ್ಸ್‌ಟೇಬಲ್ ರೂಪೇಶ್ ಪಟೇಲ್ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಕಾನ್‌ಸ್ಟೆಬಲ್ ಸಂದೀಪ್ ಪಾಂಡೆ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ