ಮತದಾನಕ್ಕೆ ನಿಂತಿರುವ ಜನತೆ  
ದೇಶ

ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಇಳಿಸಿದ ಅಪಹಾಸ್ಯಕ್ಕೆ ಯಾರು ಹೊಣೆ ಎಂದು ಯೋಚಿಸಿ: ಜಮ್ಮು-ಕಾಶ್ಮೀರ ಜನತೆಗೆ ಖರ್ಗೆ ಒತ್ತಾಯ

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮೊದಲ ಬಾರಿಗೆ, ಕೇಂದ್ರಾಡಳಿತ ಪ್ರದೇಶದ ಏಳು ಜಿಲ್ಲೆಗಳಲ್ಲಿ ಹರಡಿರುವ 24 ಕ್ಷೇತ್ರಗಳು ಬಿಗಿಯಾದ ಭದ್ರತಾ ವ್ಯವಸ್ಥೆಗಳ ನಡುವೆ 1 ನೇ ಹಂತದಲ್ಲಿ ಮತದಾನ ನಡೆದಿದೆ.

ನವದೆಹಲಿ: ದಶಕದ ನಂತರ ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇಂದು ಮೊದಲ ಹಂತದ ಮತದಾನ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಮ್ಮು ಮತ್ತು ಕಾಶ್ಮೀರದ ಮತದಾರರು ತಮ್ಮ ಮತ ಚಲಾಯಿಸುವಾಗ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಇಳಿಸುವ "ಅಪಹಾಸ್ಯ" ಕ್ಕೆ ಯಾರು ಹೊಣೆ ಎಂದು ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಜನರು ತಮ್ಮ ಹಕ್ಕುಗಳನ್ನು ಕಾಪಾಡಲು ಮತ್ತು ರಾಜ್ಯದ ನಿಜವಾದ ಅಭಿವೃದ್ಧಿ ಮತ್ತು ಸಂಪೂರ್ಣ ರಾಜ್ಯತ್ವದ ಹೊಸ ಯುಗ ಆರಂಭಿಸಲು ಉತ್ಸುಕರಾಗಿದ್ದಾರೆ ಎಂದು ಖರ್ಗೆ ಬರೆದುಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮೊದಲ ಬಾರಿಗೆ, ಕೇಂದ್ರಾಡಳಿತ ಪ್ರದೇಶದ ಏಳು ಜಿಲ್ಲೆಗಳಲ್ಲಿ ಹರಡಿರುವ 24 ಕ್ಷೇತ್ರಗಳು ಬಿಗಿಯಾದ ಭದ್ರತಾ ವ್ಯವಸ್ಥೆಗಳ ನಡುವೆ 1 ನೇ ಹಂತದಲ್ಲಿ ಮತದಾನ ನಡೆದಿದೆ.

24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದ್ದು, ಪ್ರತಿಯೊಬ್ಬರೂ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾವು ಒತ್ತಾಯಿಸುತ್ತೇವೆ ಎಂದು ಖರ್ಗೆ ಅವರು ಎಕ್ಸ್‌ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದಾರೆ.

ಪ್ರತಿಯೊಂದು ಮತವೂ ಭವಿಷ್ಯವನ್ನು ರೂಪಿಸುವ ಶಕ್ತಿಯನ್ನು ಹೊಂದಿದೆ. ಶಾಂತಿ, ಸ್ಥಿರತೆ, ನ್ಯಾಯ, ಪ್ರಗತಿ ಮತ್ತು ಆರ್ಥಿಕ ಸಬಲೀಕರಣದ ಯುಗವನ್ನು ತರುತ್ತದೆ. ಈ ನಿರ್ಣಾಯಕ ಚುನಾವಣೆಯಲ್ಲಿ ಭಾಗವಹಿಸಲು ಮತ್ತು ಬದಲಾವಣೆಗೆ ವೇಗವರ್ಧಕಗಳಾಗಿರಲು ನಾವು ಎಲ್ಲರಿಗೂ, ವಿಶೇಷವಾಗಿ ಮೊದಲ ಬಾರಿ ಮತದಾರರಲ್ಲಿ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರಾಡಳಿತ ಪ್ರದೇಶವಾಗಿ ಇದು ಚೊಚ್ಚಲ ವಿಧಾನಸಭಾ ಚುನಾವಣೆಯಾಗಿದೆ. ಕಳೆದ 10 ವರ್ಷಗಳಲ್ಲಿ ವಿಧಾನಸಭೆಯನ್ನು ಆಯ್ಕೆ ಮಾಡಿದ ಮೊದಲ ಸಮೀಕ್ಷೆಯಾಗಿದೆ. ಕೇಂದ್ರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ರದ್ದುಗೊಳಿಸಿ ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು, ಅವು ಎಂದರೆ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ -- ಇದು ಆಗಿದ್ದು, ಆಗಸ್ಟ್ 5, 2019 ರಂದು.

ಮೂರು ಹಂತದ ಚುನಾವಣೆಯ ಮೊದಲ ಹಂತದಲ್ಲಿ , ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಇಂದು ಮತ ಚಲಾಯಿಸುತ್ತಿವೆ. ಜಮ್ಮು ಪ್ರದೇಶದ ಮೂರು ಜಿಲ್ಲೆಗಳಲ್ಲಿ ಎಂಟು ಮತ್ತು ಕಾಶ್ಮೀರ ಕಣಿವೆಯ ನಾಲ್ಕು ಜಿಲ್ಲೆಗಳಲ್ಲಿ 16 - 24 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುತ್ತಿರುವ 90 ಸ್ವತಂತ್ರ ಅಭ್ಯರ್ಥಿಗಳು ಸೇರಿ 219 ಅಭ್ಯರ್ಥಿಗಳ ಭವಿಷ್ಯವನ್ನು 23 ಲಕ್ಷಕ್ಕೂ ಹೆಚ್ಚು ಮತದಾರರು ನಿರ್ಧರಿಸುತ್ತಾರೆ. ಇನ್ನೆರಡು ಹಂತಗಳು ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT