ಜವಾಹರ್ ಚಾವ್ಡಾ 
ದೇಶ

ಅನಧಿಕೃತ, ಅಕ್ರಮವಾಗಿ ಬಿಜೆಪಿ ಜಿಲ್ಲಾ ಕಚೇರಿ ನಿರ್ಮಾಣ: ಗುಜರಾತ್‌ ಮಾಜಿ ಸಚಿವ ಚಾವ್ಡಾ

2017ರಲ್ಲಿ ಬಿಜೆಪಿ ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಿರುವ ಬಗ್ಗೆ ಪುರಾವೆಗಳನ್ನು ಅಂದಿನ ಕಲೆಕ್ಟರ್‌ಗೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪತ್ರದಲ್ಲಿ ಚಾವ್ಡಾ ಆರೋಪಿಸಿದ್ದಾರೆ.

ಅಹಮದಾಬಾದ್: ಗುಜರಾತ್‌ನ ಜುನಾಗಢದ ಖಮಧ್ರೋಲ್ ಚೌಕ್‌ನಲ್ಲಿ ಅನಧಿಕೃತವಾಗಿ ಜಿಲ್ಲಾ ಬಿಜೆಪಿ ಕಚೇರಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿ ಮಾಜಿ ಕ್ಯಾಬಿನೆಟ್ ಸಚಿವ ಮತ್ತು ಬಿಜೆಪಿ ನಾಯಕ ಜವಾಹರ್ ಚಾವ್ಡಾ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

2017ರಲ್ಲಿ ಬಿಜೆಪಿ ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಿರುವ ಬಗ್ಗೆ ಪುರಾವೆಗಳನ್ನು ಅಂದಿನ ಕಲೆಕ್ಟರ್‌ಗೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪತ್ರದಲ್ಲಿ ಚಾವ್ಡಾ ಆರೋಪಿಸಿದ್ದಾರೆ.

ಚಾವ್ಡಾ ಅವರು ಈ ಹಿಂದೆ ಪ್ರಧಾನಿಗೆ ಬರೆದ ಪತ್ರದಲ್ಲಿ ಜುನಾಗಢ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿರಿಟ್ ಪಟೇಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಕೇಸರಿ ಪಕ್ಷ ಕಾನೂನುಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಜಿಲ್ಲಾ ಕಚೇರಿಯನ್ನು ನಿರ್ಮಿಸುತ್ತಿದೆ ಎಂದು ಆರೋಪಿಸಿ ಮತ್ತೊಂದು ಪತ್ರ ಬರೆದಿದ್ದರು.

ಚಾವ್ಡಾ ಅವರು 2017 ರ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅಕ್ರಮ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ತಾವು ಹಿಂದೆ ನೀಡಿದ್ದ ದೂರುಗಳನ್ನು ಸಹ ಬಹಿರಂಗಪಡಿಸಿದ್ದಾರೆ.

ಜುನಾಗಢ್‌ನ ಖಮಧ್ರೋಲ್ ಚೌಕ್‌ನಲ್ಲಿ ದೀನ್ ದಯಾಳ್ ಭವನ ಎಂಬ ಹೆಸರಿನಲ್ಲಿ ನಿರ್ಮಿಸಲಾಗಿರುವ ಬಿಜೆಪಿ ಕಚೇರಿಯನ್ನು ಭೂ ಬಳಕೆ ಷರತ್ತುಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿದೆ ಎಂದು ಬಿಜೆಪಿ ನಾಯಕ ಪತ್ರದಲ್ಲಿ ಆರೋಪಿಸಿದ್ದಾರೆ. ಅಲ್ಲದೆ ಅಂದಿನ ಮುಖ್ಯಮಂತ್ರಿ, ಸಚಿವರು ಅಥವಾ ಯಾವುದೇ ಉನ್ನತ ಗಣ್ಯರು ಕಚೇರಿ ಉದ್ಘಾಟನೆ ಮಾಡದಂತೆ ತಡೆಯಬೇಕು ಎಂದು ಜಿಲ್ಲಾಧಿಕಾರಿಗೆ ಒತ್ತಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT