ಸಂಗ್ರಹ ಚಿತ್ರ 
ದೇಶ

ತಿರುಪತಿ ಲಡ್ಡು ತಯಾರಿಕೆಗೆ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ದೃಢ

ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದನ್ನು ಗುಜರಾತ್ ಮೂಲದ ಜಾನುವಾರು ಪ್ರಯೋಗಾಲಯ, NDDB CALF Ltd ದೃಢಪಡಿಸಿದೆ ಎಂದು ಆಡಳಿತಾರೂಢ ತೆಲುಗು ದೇಶಂ ಪಕ್ಷ(ಟಿಡಿಪಿ) ಹೇಳಿದೆ.

ತಿರುಪತಿ: ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದನ್ನು ಗುಜರಾತ್ ಮೂಲದ ಜಾನುವಾರು ಪ್ರಯೋಗಾಲಯ, NDDB CALF Ltd ದೃಢಪಡಿಸಿದೆ ಎಂದು ಆಡಳಿತಾರೂಢ ತೆಲುಗು ದೇಶಂ ಪಕ್ಷ(ಟಿಡಿಪಿ) ಹೇಳಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಯೋಗಾಲಯದ ವರದಿಯನ್ನು ಪ್ರದರ್ಶಿಸಿದ ಟಿಡಿಪಿ ವಕ್ತಾರ ಆನಂ ವೆಂಕಟ ರಮಣ ರೆಡ್ಡಿ ಅವರು, ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್‌, ಸೋಯಾಬಿನ್‌, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ ಎಂದರು.

ಲ್ಯಾಬ್ ವರದಿ

ಪ್ರಯೋಗಾಲಯದ ವರದಿಯು ತುಪ್ಪದ ಮಾದರಿಯಲ್ಲಿ "ದನದ ಕೊಬ್ಬು" ಇರುವಿಕೆಯನ್ನು ದೃಢಪಡಿಸಿದೆ ಎಂದು ಹೇಳಿದ್ದಾರೆ.

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ವಾದಿಸಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT