ದೇಶ

ಮಹಾರಾಷ್ಟ್ರದ ಜಲ್ನಾದಲ್ಲಿ ಭೀಕರ ಅಪಘಾತ: ಆರು ಮಂದಿ ಸಾವು, 17 ಜನರಿಗೆ ಗಾಯ

ವಾಡಿಗೋದ್ರಿ-ಜಲನಾ ಮಾರ್ಗದ ಶಹಾಪುರ ಬಳಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಬಸ್‌ನ ಗಾಜುಗಳನ್ನು ಒಡೆದು ಗಾಯಾಳುಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಲ್ನಾ: ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಇಂದು ಶುಕ್ರವಾರ ಬೆಳಗ್ಗೆ ರಾಜ್ಯ ಸಾರಿಗೆ ಬಸ್ ಮತ್ತು ಖಾಸಗಿ ಟ್ರಕ್ ಮಧ್ಯೆ ಡಿಕ್ಕಿ ಹೊಡೆದು ಆರು ಜನರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಡಿಗೋದ್ರಿ-ಜಲನಾ ಮಾರ್ಗದ ಶಹಾಪುರ ಬಳಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (MSRTC) ಬಸ್‌ನ ಗಾಜುಗಳನ್ನು ಒಡೆದು ಗಾಯಾಳುಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಸಾರಿಗೆ ಬಸ್ ಗೆವ್ರಾಯ್‌ನಿಂದ ಜಲ್ನಾಗೆ ತೆರಳುತ್ತಿದ್ದಾಗ, ಕಿತ್ತಳೆ ಹಣ್ಣುಗಳನ್ನು ಹೊತ್ತ ಟ್ರಕ್ ಅಂಬಾಡ್‌ನಿಂದ ಬರುತ್ತಿತ್ತು. ಸ್ಥಳೀಯರ ಸಹಾಯದಿಂದ ಪೊಲೀಸರು ಗಾಯಾಳುಗಳನ್ನು ರಕ್ಷಿಸಿ ಅಂಬಾದ್ ಮತ್ತು ಜಲ್ನಾ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಅಪಘಾತಕ್ಕೆ ಕಾರಣ ಇತ್ಯಾದಿಗಳ ಬಗ್ಗೆ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!