ಪವನ್ ಕಲ್ಯಾಣ್ 
ದೇಶ

ತಿರುಪತಿ ಲಡ್ಡು ವಿವಾದ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ರಿಂದ 11 ದಿನ ಪ್ರಾಯಶ್ಚಿತ್ತ ದೀಕ್ಷೆ

ಗುಂಟೂರು ಜಿಲ್ಲೆಯ ನಮ್ಮೂರಿನ ಶ್ರೀ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರದಿಂದ ಶಾಸ್ತ್ರೋಕ್ತವಾಗಿ ಪ್ರಾಯಶ್ಚಿತ್ತ ದೀಕ್ಷೆ ಆರಂಭಿಸುವುದಾಗಿ ನಟ-ರಾಜಕಾರಣಿ ತಿಳಿಸಿದ್ದಾರೆ.

ಗುಂಟೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದಕ್ಕೆ ವೆಂಕಟೇಶ್ವರ ದೇವರಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ಕೈಗೊಳ್ಳುವುದಾಗಿ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಶನಿವಾರ ಹೇಳಿದ್ದಾರೆ.

ಗುಂಟೂರು ಜಿಲ್ಲೆಯ ನಮ್ಮೂರಿನ ಶ್ರೀ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರದಿಂದ ಶಾಸ್ತ್ರೋಕ್ತವಾಗಿ ಪ್ರಾಯಶ್ಚಿತ್ತ ದೀಕ್ಷೆ ಆರಂಭಿಸುವುದಾಗಿ ನಟ-ರಾಜಕಾರಣಿ ತಿಳಿಸಿದ್ದಾರೆ.

"11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ಕೈಗೊಂಡ ನಂತರ, ನಾನು ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳುತ್ತೇನೆ" ಎಂದು ಪವನ್ ಕಲ್ಯಾಣ್ ಅವರು 'X' ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ ಧಾರ್ಮಿಕ ಶುದ್ಧೀಕರಣ ಮಾಡುವ ಶಕ್ತಿಯನ್ನು ತನಗೆ ನೀಡುವಂತೆ ದೇವರಿಗೆ ಕೇಳಿಕೊಂಡಿದ್ದಾರೆ.

ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!