ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್: ಲೈಂಗಿಕ ಕಿರುಕುಳಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕಿಯನ್ನು ಕೊಂದ ಸರ್ಕಾರಿ ಶಾಲೆಯ ಪ್ರಾಂಶುಪಾಲ ಬಂಧನ!

ಶಾಲಾ ಪ್ರಾಂಶುಪಾಲ ಗೋವಿಂದ್ ನಾಥ್ ಅವರು, ಲೈಂಗಿಕ ಕಿರುಕುಳ ನೀಡುವ ಪ್ರಯತ್ನವನ್ನು ವಿರೋಧಿಸಿದ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ರಾಜದೀಪ್ ಸಿಂಗ್ ಝಾಲಾ ಅವರು ತಿಳಿಸಿದ್ದಾರೆ.

ದಾಹೋಡ್: ಗುಜರಾತ್‌ನ ದಾಹೋದ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಪ್ರಾಂಶುಪಾಲರನ್ನು ಲೈಂಗಿಕ ಕಿರುಕುಳ ನೀಡುವ ಪ್ರಯತ್ನವನ್ನು ವಿರೋಧಿಸಿದ ಆರು ವರ್ಷದ ವಿದ್ಯಾರ್ಥಿನಿಯನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ದಾಹೋಡ್ ತಾಲೂಕಿನ ಸಿಂಗ್ವಾಡ್ ಗ್ರಾಮದ ಶಾಲಾ ಕಾಂಪೌಂಡ್‌ನಲ್ಲಿ ಗುರುವಾರ ಮಗುವಿನ ಶವ ಪತ್ತೆಯಾದ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶಾಲಾ ಪ್ರಾಂಶುಪಾಲ ಗೋವಿಂದ್ ನಾಥ್ ಅವರು, ಲೈಂಗಿಕ ಕಿರುಕುಳ ನೀಡುವ ಪ್ರಯತ್ನವನ್ನು ವಿರೋಧಿಸಿದ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ರಾಜದೀಪ್ ಸಿಂಗ್ ಝಾಲಾ ಅವರು ತಿಳಿಸಿದ್ದಾರೆ.

"ಗುರುವಾರ ಬೆಳಗ್ಗೆ 10.20ರ ಸುಮಾರಿಗೆ ಕಾರಿನಲ್ಲಿ ಹೋಗುತ್ತಿದ್ದ ಪ್ರಾಂಶುಪಾಲರು, ಬಾಲಕಿಯ ತಾಯಿಯ ಕೋರಿಕೆಯ ಮೇರೆಗೆ ಮಗುವನ್ನು ತಮ್ಮ ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗಲು ಒಪ್ಪಿದರು. ಆದರೆ ಆ ದಿನ ಬಾಲಕಿ ಶಾಲೆಗೆ ಬಂದಿರಲಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪೊಲೀಸರಿಗೆ ತಿಳಿಸಿದ್ದಾರೆ.

ಆರಂಭದಲ್ಲಿ ಪ್ರಿನ್ಸಿಪಾಲ್, ಬಾಲಕಿಯನ್ನು ತನ್ನ ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗಿ ಬಿಟ್ಟಿರುವುದಾಗಿ ಹೇಳಿದ್ದರು. ಆದರೆ ಪೊಲೀಸರ ತೀವ್ರ ವಿಚಾರಣೆ ಬಳಿಕ ಬಾಲಕಿಯನ್ನು ತಾನೇ ಕೊಂದಿರುವುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಕಾರಿನಲ್ಲಿ ಶಾಲೆಗೆ ಹೋಗುವಾಗ ದಾರಿಯಲ್ಲಿ ಪ್ರಾಂಶುಪಾಲರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾರೆ. ಅವಳು ವಿರೋಧಿಸಿದಾಗ ಮತ್ತು ಬಾಲಕಿ ಕಿರುಚುವುದನ್ನು ತಡೆಯಲು ಅವಳ ಬಾಯಿ ಮತ್ತು ಮೂಗನ್ನು ಗಟ್ಟಿಯಾಗಿ ಮುಚ್ಚಿದ್ದಾರೆ. ಇದರಿಂದ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ ಎಂದು ಝಲಾ ತಿಳಿಸಿದ್ದಾರೆ.

"ಪ್ರಾಂಶುಪಾಲರು ಬಾಲಕಿಯ ಶವದೊಂದಿಗೆ ಶಾಲೆಗೆ ತೆರಳಿ, ಕಾರನ್ನು ದೂರದಲ್ಲಿಯೇ ನಿಲ್ಲಿಸಿದ್ದಾರೆ. ಸಂಜೆ 5 ಗಂಟೆಗೆ ಅವರು ಶವವನ್ನು ಹೊರತೆಗೆದು ಶಾಲಾ ಕಟ್ಟಡದ ಹಿಂದೆ ಎಸೆದಿದ್ದಾರೆ. ನಂತರ ಆಕೆಯ ಶಾಲಾ ಬ್ಯಾಗ್ ಮತ್ತು ಚಪ್ಪಲಿಗಳನ್ನು ಆಕೆಯ ತರಗತಿಯಲ್ಲಿಟ್ಟಿದ್ದಾರೆ" ಎಂದು ಝಲಾ ಹೇಳಿದ್ದಾರೆ.

ಬಾಲಕಿಯ ಶವ ಪತ್ತೆಯಾದ ಒಂದು ದಿನದ ನಂತರ, ಆಕೆಯ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಮಗು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದೆ ಎಂದು ಝಲಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್