ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು  
ದೇಶ

ತಿರುಪತಿ ಲಡ್ಡು ವಿವಾದ: ತನಿಖೆಗೆ ಎಸ್ಐಟಿ ರಚನೆ- ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿದ ಬಗ್ಗೆ, ಅಧಿಕಾರದ ದುರುಪಯೋಗದ ಬಗ್ಗೆ ತನಿಖೆ ನಡೆಸಿ ಸರ್ಕಾರಕ್ಕೆ ಎಸ್ಐಟಿ ವರದಿ ನೀಡುತ್ತದೆ.

ಅಮರಾವತಿ: ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿದ ಆರೋಪದ ಬಗ್ಗೆ ತನಿಖೆ ನಡೆಸಲು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಭಾನುವಾರ ವಿಶೇಷ ತನಿಖಾ ತಂಡ ರಚಿಸುವುದಾಗಿ ಘೋಷಿಸಿದ್ದಾರೆ.

ಹಿಂದೂ ದೇವಾಲಯಗಳ ಪಾವಿತ್ರ್ಯತೆ ಕಾಪಾಡಲು ಸೂಕ್ತ ಕ್ರಮಕೈಗೊಳ್ಳುವಂತೆ ವಿವಿಧ ವಲಯಗಳಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಲು ನಿರ್ಧರಿಸಿದೆ.

ಪ್ರಕರಣದ ತನಿಖೆಗೆ "ಇನ್‌ಸ್ಪೆಕ್ಟರ್ ಜನರಲ್(ಐಜಿ) ಮಟ್ಟದ ಅಥವಾ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಯ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗುವುದು. ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿದ ಬಗ್ಗೆ, ಅಧಿಕಾರದ ದುರುಪಯೋಗದ ಬಗ್ಗೆ ತನಿಖೆ ನಡೆಸಿ ಸರ್ಕಾರಕ್ಕೆ ಎಸ್ಐಟಿ ವರದಿ ನೀಡುತ್ತದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ನಮ್ಮ ಸರ್ಕಾರ ಲಡ್ಡು ಕಲಬೆರಕೆ ತಪ್ಪಿಸಲು ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಆಂಧ್ರ ಸಿಎಂ ಹೇಳಿದ್ದಾರೆ.

ಈ ಮಧ್ಯೆ ವಿಶೇಷ ತನಿಖಾ ತಂಡದಿಂದ(ಎಸ್‌ಐಟಿ) ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದ್ದು, ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!