ರೈಲ್ವೆ ಹಳಿ ಮೇಲೆ ಕಬ್ಬಿಣದ ರಾಡ್ 
ದೇಶ

ಪಂಜಾಬ್‌: ರೈಲು ಹಳಿ ಮೇಲೆ ಕಬ್ಬಿಣದ ರಾಡ್‌ಗಳು ಪತ್ತೆ!

ದೆಹಲಿ-ಬಟಿಂಡಾ ಮಾರ್ಗದ ಬಾಂಗಿ ನಗರದ ಬಳಿ ಭಾನುವಾರ ರಾಡ್‌ಗಳು ಪತ್ತೆಯಾಗಿವೆ. ಗೂಡ್ಸ್ ರೈಲು ಲೋಕೋ ಪೈಲಟ್ ರಾಡ್‌ಗಳನ್ನು ಗುರುತಿಸಿದ್ದಾರೆ.

ಬಟಿಂಡಾ: ಮತ್ತೊಂದು ಸಾಮೂಹಿಕ ಹತ್ಯೆಯ ಯತ್ನ ನಡೆದಿದೆ. ಪಂಜಾಬ್‌ನ ಬಟಿಂಡಾ ಜಿಲ್ಲೆಯಲ್ಲಿ ಹಳಿಗಳ ಮೇಲೆ ಒಂಬತ್ತು ಕಬ್ಬಿಣದ ರಾಡ್‌ಗಳು ಪತ್ತೆಯಾಗಿದ್ದು, ಸ್ವಲ್ಪ ಸಮಯದವರೆಗೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ದೆಹಲಿ-ಬಟಿಂಡಾ ಮಾರ್ಗದ ಬಾಂಗಿ ನಗರದ ಬಳಿ ಭಾನುವಾರ ರಾಡ್‌ಗಳು ಪತ್ತೆಯಾಗಿವೆ. ಗೂಡ್ಸ್ ರೈಲು ಲೋಕೋ ಪೈಲಟ್ ರಾಡ್‌ಗಳನ್ನು ಗುರುತಿಸಿದ್ದಾರೆ. ಸ್ಥಳದಿಂದ ಒಂಬತ್ತು ಕಬ್ಬಿಣದ ರಾಡ್‌ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಟಿಂಡಾದಿಂದ BWL Kori ಕಡೆಗೆ ತೆರಳುತ್ತಿದ್ದ ಗೂಡ್ಸ್ ರೈಲಿನ ಲೋಕೋ ಪೈಲಟ್ ರಾಡ್‌ಗಳನ್ನು ನೋಡಿದ್ದಾರೆ. ಬಳಿಕ ಪಾಯಿಂಟ್‌ಮ್ಯಾನ್ ಮತ್ತು ಸಹಾಯಕ ಸ್ಟೇಷನ್ ಮಾಸ್ಟರ್ ಅವುಗಳನ್ನು ತೆಗೆದಿದ್ದಾರೆ. ಸುಮಾರು 40 ನಿಮಿಷಗಳ ಕಾಲ ರೈಲನ್ನು ತಡೆ ಹಿಡಿಯಲಾಯಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಳಿಕ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ಜಿಆರ್‌ಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ಸುಳಿವಿಗಾಗಿ ಶೋಧ ನಡೆಸಲಾಗುತ್ತಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದರ ಕುರಿತು ಪತ್ತೆ ಮಾಡಲು ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ತೀವ್ರಗತಿಯಲ್ಲಿ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಕೆಲವು ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್‌ಒ) ಹಿಮಾಂಶು ಉಪಾಧ್ಯಾಯ ಹೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT