ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪುಲ್ವಾಮಾ ಉಗ್ರರ ದಾಳಿ: ಆರೋಪಿ ಹೃದಯಾಘಾತದಿಂದ ಸಾವು

ಈ ಪ್ರಕರಣದಲ್ಲಿ ಕುಚೇ ಮತ್ತಿತರ 18 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಆಗಸ್ಟ್ 25, 2020 ರಂದು ಆರೋಪ ಪಟ್ಟಿ ಸಲ್ಲಿಸಿತ್ತು.

Nagaraja AB
Updated On : 24 Sept 2024, 2:25 pm

ಜಮ್ಮು: ಐದು ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆ ಮೇಲೆ ನಡೆದ ಉಗ್ರರ ದಾಳಿಯ ಆರೋಪಿಯಾಗಿದ್ದ 32 ವರ್ಷದ ವ್ಯಕ್ತಿಯೋರ್ವ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಕಾಕಪೋರಾದ ಹಾಜಿಬಲ್ ಗ್ರಾಮದ ಬಿಲಾಲ್ ಅಹ್ಮದ್ ಕುಚೆ ಸೇರಿದಂತೆ 19 ಮಂದಿ ಆರೋಪಿಗಳಾಗಿದ್ದರು.

ಫೆಬ್ರವರಿ 14, 2019 ರಂದು ಪುಲ್ವಾಮಾದ ಲೆಥ್‌ಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್‌ನ ಭಯೋತ್ಪಾದಕ ತನ್ನ ಸ್ಫೋಟಕ ತುಂಬಿದ ಕಾರನ್ನು ಸಿಆರ್ ಪಿಎಫ್ ಬೆಂಗಾವಲು ಪಡೆಗೆ ಡಿಕ್ಕಿ ಹೊಡೆದಾಗ ನಲವತ್ತು ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದರು ಮತ್ತು ಎಂಟು ಮಂದಿ ಗಾಯಗೊಂಡಿದ್ದರು.

Advertisement

Advertisement

ಕುಚೇಯ್ ಕಿಶ್ತ್ವಾರ್ ಜಿಲ್ಲಾ ಜೈಲಿನಲ್ಲಿ ಅನಾರೋಗ್ಯಕ್ಕೆ ಒಳಗಾದ ನಂತರ ಅವರನ್ನು ಸೆಪ್ಟೆಂಬರ್ 17 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು ಎಂದು ಅಧಿಕಾರಿ ತಿಳಿಸಿದರು.

Also Read

ಪುಲ್ವಾಮಾ ಹುತಾತ್ಮ ಯೋಧರ ಪತ್ನಿಯರ ಮಂಗಳಸೂತ್ರ ಕಿತ್ತುಕೊಂಡಿದ್ದು ಯಾರು?: ಡಿಂಪಲ್ ಯಾದವ್

ಈ ಪ್ರಕರಣದಲ್ಲಿ ಕುಚೇ ಮತ್ತಿತರ 18 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಆಗಸ್ಟ್ 25, 2020 ರಂದು ಆರೋಪ ಪಟ್ಟಿ ಸಲ್ಲಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement