ದಾಮೋಹ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಮಣ್ಣ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿಕೀರ್ತಿ ಸೋಮವಂಶಿ ಅವರು ಹೇಳಿದ್ದಾರೆ.
ರಸ್ತೆಯಲ್ಲಿ ರಚಿಸಲಾದ ವಿಶೇಷ ಕಾರಿಡಾರ್ ಮೂಲಕ ಗಾಯಾಳುಗಳನ್ನು ಜಬಲ್ಪುರಕ್ಕೆ ರವಾನಿಸಲಾಯಿತು. "ಪೊಲೀಸ್ ಸಿಬ್ಬಂದಿ ಮತ್ತು ಗ್ರಾಮದ ನಿವಾಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು" ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.