ಕಂಗನಾ ರಣಾವತ್ PTI
ದೇಶ

ಕೃಷಿ ಕಾನೂನು ಹೇಳಿಕೆ ವಿರುದ್ಧ ಜನಾಕ್ರೋಶ: ಹೇಳಿಕೆ ಹಿಂಪಡೆದು ಬಿಜೆಪಿ MP ಕಂಗನಾ ರಣಾವತ್ ಕ್ಷಮೆಯಾಚನೆ!

ಇನ್ನು ಮುಂದೆ ನಾನು ಕಲಾವಿದೆಯಲ್ಲ, ಬಿಜೆಪಿ ಕಾರ್ಯಕರ್ತೆ ಎಂಬುದನ್ನೂ ನೆನಪಿನಲ್ಲಿಟ್ಟುಕೊಳ್ಳಬೇಕು.

ನವದೆಹಲಿ: ಭಾರತೀಯ ಜನತಾ ಪಕ್ಷದ (BJP) ಸಂಸದೆ ಕಂಗನಾ ರಣಾವತ್ ಅವರು ಮೂರು ಕೃಷಿ ಕಾನೂನುಗಳನ್ನು ಮರಳಿ ತರಲು ಒತ್ತಾಯಿಸಿದ್ದು ಇದೀಗ ಯು-ಟರ್ನ್ ತೆಗೆದುಕೊಂಡಿದ್ದಾರೆ. ತಮ್ಮ ಮಾತಿನಿಂದ ಯಾರಿಗಾದರೂ ನಿರಾಸೆಯಾಗಿದ್ದರೆ ಪಶ್ಚಾತ್ತಾಪ ಪಡುತ್ತೇನೆ ಎಂದು ತಮ್ಮ ಹೇಳಿಕೆಯನ್ನು ವಾಪಸ್ ತೆಗೆದುಕೊಂಡಿದ್ದಾರೆ. ರದ್ದಾದ ಮೂರು ಕೃಷಿ ಕಾನೂನುಗಳನ್ನು ವಾಪಸ್ ತರಬೇಕು ಎಂದು ಕಂಗನಾ ರಣಾವತ್ ಹೇಳಿದ್ದರು. ಅವರ ಈ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿತ್ತು.

ಮಂಡಿ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದರಾಗಿರುವ ಕಂಗನಾ ರಣಾವತ್ ಇಂದು ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾರೆ. ಮಾಧ್ಯಮದವರು ನನಗೆ ಕೃಷಿ ಕಾನೂನುಗಳ ಬಗ್ಗೆ ಪ್ರಶ್ನೆ ಕೇಳಿದ್ದರು. ಈ ಕಾನೂನುಗಳನ್ನು ಮರಳಿ ತರಲು ರೈತರು ಪ್ರಧಾನಿಗೆ ಮನವಿ ಮಾಡಬೇಕು ಎಂದು ನಾನು ಸಲಹೆ ನೀಡಿದ್ದೇನೆ. ನನ್ನ ಈ ಹೇಳಿಕೆಯಿಂದ ಅನೇಕರಿಗೆ ಬೇಸರವಾಗಿದೆ.

ಕಂಗನಾ ಈಗ ತಾನು ಬಿಜೆಪಿ ನಾಯಕಿ ಎಂದು ಅರಿತುಕೊಂಡಿದ್ದು, ಎಚ್ಚರಿಕೆಯಿಂದ ಮಾತುಕತೆ ನಡೆಸಬೇಕು ಎಂದು ಹೇಳಿದರು, 'ಕೃಷಿ ಕಾನೂನುಗಳನ್ನು ಪರಿಚಯಿಸಿದಾಗ, ನಮ್ಮಲ್ಲಿ ಅನೇಕರು ಅದನ್ನು ಬೆಂಬಲಿಸಿದರು. ಆದರೆ ಸೂಕ್ಷ್ಮತೆ ಮತ್ತು ಸಹಾನುಭೂತಿಯಿಂದ ಪ್ರಧಾನಿ ಕಾನೂನುಗಳನ್ನು ಹಿಂತೆಗೆದುಕೊಂಡರು. ಅವರ ಮಾತಿನ ಘನತೆ ಕಾಪಾಡುವುದು ನಮ್ಮ ಎಲ್ಲ ಕಾರ್ಯಕರ್ತರ ಕರ್ತವ್ಯ. ಇನ್ನು ಮುಂದೆ ನಾನು ಕಲಾವಿದೆಯಲ್ಲ, ಬಿಜೆಪಿ ಕಾರ್ಯಕರ್ತೆ ಎಂಬುದನ್ನೂ ನೆನಪಿನಲ್ಲಿಟ್ಟುಕೊಳ್ಳಬೇಕು. ನನ್ನ ಅಭಿಪ್ರಾಯಗಳು ನನ್ನದೇ ಆಗಬಾರದು, ಪಕ್ಷದ ನಿಲುವು ಇರಬೇಕು ಎಂದು ಕಂಗನಾ ಹೇಳಿದ್ದು ತಮ್ಮ ಆಲೋಚನೆಗಳು ಯಾರಿಗಾದರೂ ನಿರಾಸೆ ತಂದಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಕಂಗನಾ ರಣಾವತ್ ಅವರು ಮಾರುಕಟ್ಟೆಯಲ್ಲಿ ಕಾರ್ಮಿಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಕೃಷಿ ಕಾನೂನುಗಳ ಬಗ್ಗೆ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಈ ಹೇಳಿಕೆಯನ್ನು ಬಳಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದವು. ಹರ್ಯಾಣದಲ್ಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಇಂತಹ ಹೇಳಿಕೆಯಿಂದ ನಷ್ಟವಾಗುವ ಸಾಧ್ಯತೆಯನ್ನು ಕಂಡ ಬಿಜೆಪಿ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಮಂಗಳವಾರ ರಾತ್ರಿ ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಹೇಳಿಕೆ ನೀಡಿ ಕಂಗನಾ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯವಲ್ಲ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಕಂಗನಾಗೆ ಪಕ್ಷದಿಂದ ಎಚ್ಚರಿಕೆ ನೀಡಿ ಮಾತನಾಡುವಂತೆ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT