ಸಂಜಯ್ ರಾವತ್ PTI
ದೇಶ

ಮಾನನಷ್ಟ ಮೊಕದ್ದಮೆ: ಜೈಲು ಶಿಕ್ಷೆ ತೀರ್ಪಿನ ಬೆನ್ನಲ್ಲೇ ಸಂಜಯ್ ರಾವತ್‌ಗೆ ಜಾಮೀನು ಮಂಜೂರು

ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರಿಟ್ ಸೋಮಯ್ಯ ಅವರ ದೂರಿನ ಮೇರೆಗೆ ರಾವತ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿತ್ತು.

ಮುಂಬೈ: ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಗೆ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಜೈಲು ಶಿಕ್ಷೆ ಮತ್ತು ರೂ. 25,000 ದಂಡ ವಿಧಿಸಿತ್ತು. ಇದರ ಬೆನ್ನಲ್ಲೇ ಕೆಲ ಗಂಟೆಯಲ್ಲೇ ಸಂಜಯ್ ರಾವತ್ ಗೆ ಜಾಮೀನು ಸಿಕ್ಕಿದೆ.

ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರಿಟ್ ಸೋಮಯ್ಯ ಅವರ ದೂರಿನ ಮೇರೆಗೆ ರಾವತ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿತ್ತು. ಅಲ್ಲದೆ ಕೋರ್ಟ್ ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಿತ್ತು. ಈ ಬಳಿಕ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಸಲ್ಲಿಸಿದ ಅರ್ಜಿಯ ಮೇರೆಗೆ ಜಾಮೀನು ನೀಡಿದೆ.

ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಆರತಿ ಕುಲಕರ್ಣಿ ಅವರು ಭಾರತೀಯ ದಂಡ ಸಂಹಿತೆ ಸೆಕ್ಷನ್ 500ರ ಅಡಿಯಲ್ಲಿ ರಾವುತ್ ಅವರನ್ನು ದೋಷಿ ಎಂದು ತೀರ್ಪು ನೀಡಿದರು. ಜೈಲು ಶಿಕ್ಷೆಯ ಜೊತೆಗೆ 25,000 ರೂಪಾಯಿ ದಂಡವನ್ನೂ ನ್ಯಾಯಾಲಯ ವಿಧಿಸಿತ್ತು.

ನ್ಯಾಯಾಲಯದ ತೀರ್ಪಿನ ನಂತರ, ರಾವುತ್ ಪರ ವಕೀಲರು ಶಿಕ್ಷೆಯನ್ನು ಅಮಾನತುಗೊಳಿಸಲು ಮತ್ತು ಅವರಿಗೆ ಜಾಮೀನು ನೀಡುವಂತೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದು ಇದನ್ನು ಪುರಸ್ಕರಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮೀರಾ ಭಯಂದರ್‌ನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದ 100 ಕೋಟಿ ರೂ. ಹಗರಣದಲ್ಲಿ ತಾನು ಮತ್ತು ತನ್ನ ಪತಿ ಭಾಗಿಯಾಗಿದ್ದಾರೆ ಎಂದು ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ರಾವತ್ ಮಾಡಿದ್ದಾರೆ ಎಂದು ಆರೋಪಿಸಿ ಮೇಧಾ ಸೋಮಯ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಜನಸಾಮಾನ್ಯರ ಮುಂದೆ ನನ್ನ ವರ್ಚಸ್ಸು ಹಾಳು ಮಾಡಲು ಆರೋಪ ಮಾಡಲಾಗಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT