ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ತ್ರಿಶೂರ್ ನಲ್ಲಿ ATM ದರೋಡೆ, ಪೊಲೀಸರ ಗುಂಡೇಟಿಗೆ ಓರ್ವ ಸಾವು, ಆರು ಮಂದಿ ಬಂಧನ

ದರೋಡೆಕೋರರ ಗ್ಯಾಂಗ್ ತ್ರಿಶೂರ್ ಜಿಲ್ಲೆಯಲ್ಲಿ ಎಟಿಎಂ ದರೋಡೆ ಮಾಡಿ, ನಗದು ಮತ್ತು ಆಯುಧಗಳೊಂದಿಗೆ ಕಂಟೈನರ್ ಲಾರಿಯೊಂದರಲ್ಲಿ ಪರಾರಿಯಾಗುತಿತ್ತು. ಈ ಖದೀಮರ ತಂಡವನ್ನು ಬೆನ್ನಟ್ಟಿದ್ದ ಪೊಲೀಸರು, ವಾಹನ ನಿಲ್ಲಿಸುವಂತೆ ಹೇಳಿದರೂ ಅದನ್ನು ನಿರಾಕರಿಸಿ ವೇಗವಾಗಿ ಹೋಗುತ್ತಿದ್ದಾಗ ಗುಂಡು ಹಾರಿಸಿದ್ದಾರೆ.

ತ್ರಿಶೂರ್: ಕೇರಳದ ತ್ರಿಶೂರ್‌ನಲ್ಲಿ ಶುಕ್ರವಾರ ಎಟಿಎಂ ದರೋಡೆಯಲ್ಲಿ ಭಾಗಿಯಾಗಿದ್ದ ಶಂಕಿತ ಏಳು ಜನರ ಗ್ಯಾಂಗ್‌ ನ್ನು ಗುರಿಯಾಗಿಸಿ ನಾಮಕ್ಕಲ್ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಓರ್ವ ಬಲಿಯಾಗಿದ್ದಾನೆ. ಇತರ ಆರು ಮಂದಿಯನ್ನು ಬಂಧಿಸಲಾಗಿದೆ.

ದರೋಡೆಕೋರರ ಗ್ಯಾಂಗ್ ತ್ರಿಶೂರ್ ಜಿಲ್ಲೆಯಲ್ಲಿ ಎಟಿಎಂ ದರೋಡೆ ಮಾಡಿ, ನಗದು ಮತ್ತು ಆಯುಧಗಳೊಂದಿಗೆ ಕಂಟೈನರ್ ಲಾರಿಯೊಂದರಲ್ಲಿ ಪರಾರಿಯಾಗುತಿತ್ತು. ಈ ಖದೀಮರ ತಂಡವನ್ನು ಬೆನ್ನಟ್ಟಿದ್ದ ಪೊಲೀಸರು, ವಾಹನ ನಿಲ್ಲಿಸುವಂತೆ ಹೇಳಿದರೂ ಅದನ್ನು ನಿರಾಕರಿಸಿ ವೇಗವಾಗಿ ಹೋಗುತ್ತಿದ್ದಾಗ ಗುಂಡು ಹಾರಿಸಿದ್ದಾರೆ.

ಎನ್ ಕೌಂಟರ್ ನಲ್ಲಿ ಓರ್ವ ಕಳ್ಳ ಸಾವನ್ನಪ್ಪಿದ್ದಾನೆ. ದರೋಡೆಗೆ ಬಳಸಿದ್ದ ಕಾರನ್ನು ಕಂಟೈನರ್ ಟ್ರಕ್‌ನೊಂದಿಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಮಕ್ಕಲ್ ಜಿಲ್ಲೆಯ ಕುಮಾರಪಾಳ್ಯಂನಲ್ಲಿ ಈ ಘಟನೆ ನಡೆದಿದೆ.

ತ್ರಿಶೂರ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎಟಿಎಂ ದರೋಡೆಯಲ್ಲಿ ಅವರ ಪಾತ್ರವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಸಲಾಗುತ್ತಿದೆ ಎಂದು ಸೇಲಂ ವಲಯದ ಡಿಐಜಿ ಇ ಎಸ್ ಉಮಾ ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದಾಗ ಓರ್ವ ಕಳ್ಳ ಗಾಯಗೊಂಡಿದ್ದಾನೆ. ಘಟನೆ ವೇಳೆ ಗಾಯಗೊಂಡಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ದರೋಡೆಕೋರರು ಹರಿಯಾಣದಿಂದ ಬಂದವರಾಗಿದ್ದಾರೆ. ನಾಮಕ್ಕಲ್ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಇದೇ ರೀತಿಯ ದರೋಡೆಯಲ್ಲಿ ಹರಿಯಾಣದ ಇಬ್ಬರನ್ನು ಪೊಲೀಸರು ಬಂಧಿಸಿದ್ದರು ಎಂದು ಡಿಐಜಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!