ಬಿಜೆಪಿ online desk
ದೇಶ

ವೃತ್ತಿಪರ ಕಳ್ಳರ ಪ್ರತಿಕ್ರಿಯೆ: ಸಿಬಿಐ ತನಿಖೆಗೆ ಮುಕ್ತ ಅನುಮತಿ ವಾಪಸ್ ನಿರ್ಧಾರಕ್ಕೆ ಬಿಜೆಪಿ ಪ್ರತಿಕ್ರಿಯೆ

5,000 ಕೋಟಿ ರೂ. ಮೌಲ್ಯದ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಬಹಿರಂಗವಾದಾಗಿನಿಂದ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನ "ಒಂದೇ ಧೋರಣೆ" ಅನುಸರಿಸುತ್ತಿದ್ದಾರೆ ಎಂದು ಪೂನವಾಲಾ ಆರೋಪಿಸಿದರು.

ನವದೆಹಲಿ: ರಾಜ್ಯದಲ್ಲಿ ಸಿಬಿಐ ತನಿಖೆಗೆ ಮುಕ್ತ ಅನುಮತಿ ವಾಪಸ್ ಪಡೆಯುವ ರಾಜ್ಯಸರ್ಕಾರದ ತೀರ್ಮಾನವನ್ನು ವಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಸಿಎಂ ಸಿದ್ದರಾಮಯ್ಯ ಮುಡಾ ಹಗರಣ ಪ್ರಕರಣ ತನಿಖೆಯಾಗಬೇಕೆಂದು ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎನ್ನಲಾದ ಮುಡಾ ಹಗರಣದ ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರದ ಈ ಕ್ರಮ ಕೈಗೊಂಡಿದೆ ಎಂದು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ, ಈ ನಿರ್ಧಾರವು ಸ್ವತಃ ತಪ್ಪಿತಸ್ಥ ಮನಸ್ಸನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.

''ಮುಡಾ ಹಗರಣದಲ್ಲಿ ಸಾವಿರಾರು ಕೋಟಿ ಲೂಟಿ ಮಾಡಲಾಗಿದೆ. ಇದಾದ ಬಳಿಕ ಕಾಂಗ್ರೆಸ್ ಯಾವುದೇ ವೃತ್ತಿಪರ 'ಚೋರ್ ಮತ್ತು ಲೂಟಿ' (ಕಳ್ಳ ಮತ್ತು ದರೋಡೆಕೋರ)ನಿಂದ ನಿರೀಕ್ಷಿಸಿದ್ದನ್ನು ಕಾಂಗ್ರೆಸ್ ಮಾಡಿದೆ ಎಂದು ಬಿಜೆಪಿ ವಕ್ತಾರರು ವಾಗ್ದಾಳಿ ನಡೆಸಿದ್ದಾರೆ. ಕಾನೂನಿನ ದೀರ್ಘ ಹಸ್ತದಿಂದ ತಪ್ಪಿಸಿಕೊಳ್ಳಲು, ರಾಜ್ಯದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಮುಕ್ತ ಒಪ್ಪಿಗೆಯನ್ನು ಹಿಂಪಡೆದಿದೆ, ”ಎಂದು ಅವರು ಹೇಳಿದ್ದಾರೆ.

"ಕಾಂಗ್ರೆಸ್ ವೃತ್ತಿಪರ ಕಳ್ಳ ಮತ್ತು ವೃತ್ತಿಪರ ಭ್ರಷ್ಟ ಪಕ್ಷದಂತೆ ವರ್ತಿಸುತ್ತಿದೆ. ಮೊದಲು ತಪ್ಪು ಮಾಡಿ ನಂತರ ಅದರ ಬಗ್ಗೆ ದಿಟ್ಟತನದಿಂದ ವರ್ತಿಸಿ, ಇದು ಕರ್ನಾಟಕ ಮತ್ತು ಅಧಿಕಾರದಲ್ಲಿರುವ ಇತರ ರಾಜ್ಯಗಳಲ್ಲಿ ಕಾಂಗ್ರೆಸ್‌ನ ವರ್ತನೆ ಮತ್ತು ಧೋರಣೆಯಾಗಿದೆ" ಎಂದು ಪೂನಾವಾಲಾ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸೇರಿದಂತೆ ಇತರೆ ಅಭಿವೃದ್ಧಿ ಯೋಜನೆಗಳಿಗೆ ಭೂಮಿ ಕಳೆದುಕೊಂಡವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನವನ್ನು ಮೋಸದಿಂದ ಮಂಜೂರು ಮಾಡಲಾಗಿದೆ ಎಂದು ಕರ್ನಾಟಕದ ವಿರೋಧ ಪಕ್ಷಗಳು ಆರೋಪಿಸಿವೆ.

5,000 ಕೋಟಿ ರೂ. ಮೌಲ್ಯದ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಬಹಿರಂಗವಾದಾಗಿನಿಂದ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನ "ಒಂದೇ ಧೋರಣೆ" ಅನುಸರಿಸುತ್ತಿದ್ದಾರೆ ಎಂದು ಪೂನವಾಲಾ ಆರೋಪಿಸಿದರು ಮತ್ತು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ