ಸ್ವತಂತ್ರ ಸೇನಾನಿ ಎಕ್ಸ್ ಪ್ರೆಸ್ online desk
ದೇಶ

ಸ್ವತಂತ್ರ ಸೇನಾನಿ ಎಕ್ಸ್ ಪ್ರೆಸ್ ಗೆ ಕಲ್ಲು ತೂರಾಟ!

ಘಟನೆಯಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಆದರೆ ಪ್ಯಾಂಟ್ರಿ ಕಾರು ಸೇರಿದಂತೆ ಮೂರು ಕೋಚ್‌ಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಮಷ್ಟಿಪುರ: ಜಯನಗರ್-ನವದೆಹಲಿ ನಡುವಿನ ಸ್ವತಂತ್ರ ಸೇನಾನಿ ಎಕ್ಸ್ ಪ್ರೆಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬಿಹಾರದ ಸಮಷ್ಟಿಪುರದ ಬಳಿ ಈ ಘಟನೆ ನಡೆದಿದೆ ಎಂದು ಇಸಿಆರ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಆದರೆ ಪ್ಯಾಂಟ್ರಿ ಕಾರು ಸೇರಿದಂತೆ ಮೂರು ಕೋಚ್‌ಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಗುರುವಾರ ರಾತ್ರಿ 9.50ರ ಸುಮಾರಿಗೆ ರೈಲು ರೈಲು ನಿಲ್ದಾಣದ ಹೊರ ಸಿಗ್ನಲ್ ತಲುಪಿದಾಗ ಈ ಘಟನೆ ನಡೆದಿದೆ. ಕಲ್ಲು ತೂರಾಟ ನಡೆದ ತಕ್ಷಣ ಎಚ್ಚೆತ್ತ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದ್ದು, ಸ್ವಲ್ಪ ಸಮಯದ ನಂತರ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಕೂಡ ಸ್ಥಳಕ್ಕೆ ತಲುಪಿದ್ದಾರೆ.

ಇಸಿಆರ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್‌ಒ) ಶರ್ಸ್ವತಿ ಚಂದ್ರ ಪಿಟಿಐ ಜೊತೆಗೆ ಮಾತನಾಡಿದ್ದು, “ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಹೊರಭಾಗದ ಸಿಗ್ನಲ್ ತಲುಪಿದಾಗ ಸಮಸ್ತಿಪುರ ರೈಲು ನಿಲ್ದಾಣದ ಬಳಿ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು ಎಂದು ಹೇಳಿದ್ದಾರೆ.

"ಸ್ವಲ್ಪ ಸಮಯದ ನಂತರ, ಸಮಸ್ತಿಪುರದಿಂದ ಹೊರಡುವ ರೈಲು ಮುಜಾಫರ್‌ಪುರ ರೈಲು ನಿಲ್ದಾಣಕ್ಕೆ ಹೊರಟಿತು" ಎಂದು ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಮಸ್ತಿಪುರ ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಒ) ಆರ್‌ಕೆ ಸಿಂಗ್, “ಪ್ಯಾಂಟ್ರಿ ಕಾರಿನ ಕಿಟಕಿ ಫಲಕಗಳು ಮತ್ತು ಎ1 ಮತ್ತು ಬಿ 2 ಕೋಚ್‌ಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT