ಒಳಉಡುಪಿನಲ್ಲಿ ಪರೇಡ್ ನಡೆಸಿದ್ದ ಯುವತಿ  
ದೇಶ

Madhya Pradesh: ಒಳಉಡುಪಿನಲ್ಲಿ ಪರೇಡ್ ನಡೆಸಿದ್ದ ಯುವತಿ ಬಂಧನ

ಈ ವಿಡಿಯೋ ವ್ಯಾಪಕ ವೈರಲ್ ಆಗಿ ಸ್ಥಳೀಯ ರಾಜಕೀಯ ನಾಯಕರು ಹಾಗೂ ಸ್ಥಳೀಯರು ಯುವತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇಂದೋರ್: ಒಳಉಡುಪಿನಲ್ಲಿ ರಸ್ತೆ ಮೇಲೆ ಪರೇಡ್ ನಡೆಸಿ ರೀಲ್ಸ್ ಮಾಡಿದ್ದ ಯುವತಿಯನ್ನು ಇಂದೋರ್ ಪೊಲೀಸರು ಬಂಧಿಸಿದ್ದಾರೆ.

ಮಧ್ಯ ಪ್ರದೇಶದ ಇಂದೋರ್ ನ ಖ್ಯಾತ ಫುಡ್ ಸ್ಟ್ರೀಟ್ 56 Dukaan ರಸ್ತೆಯಲ್ಲಿ ಒಳಉಡುಪಿನಲ್ಲಿ ಪರೇಡ್ ಮಾಡಿದ್ದು ಅಲ್ಲದೆ ಅದನ್ನು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಯುವತಿ ಅಪ್ಲೋಡ್ ಮಾಡಿದ್ದಳು. ಈ ವಿಡಿಯೋ ವ್ಯಾಪಕ ವೈರಲ್ ಆಗಿ ಸ್ಥಳೀಯ ರಾಜಕೀಯ ನಾಯಕರು ಹಾಗೂ ಸ್ಥಳೀಯರು ಯುವತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಅತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಯುವತಿ ಕ್ಷಮೆ ಯಾಚಿಸಿ ತಾನು ಹೀಗೆ ಮಾಡಬಾರದಿತ್ತು. ನನ್ನಿಂದ ಇಂದೋರ್ ನ ಮಾನ ಹರಾಜಾಗಿದೆ. ಹೀಗಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮತ್ತೊಂದು ವಿಡಿಯೋ ಮಾಡಿದ್ದಳು. ಇದೀಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಂದೋರ್ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ಆಕೆ ವಿರುದ್ಧ ಇಂದೋರ್ ನ ತುಕೋಗಂಜ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 296 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಕೃತ್ಯ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಎಂದು ಠಾಣಾ ಉಸ್ತುವಾರಿ ಪೊಲೀಸ್ ಅಧಿಕಾರಿ ಜಿತೇಂದ್ರ ಸಿಂಗ್ ಯಾದವ್ ಹೇಳಿದ್ದಾರೆ.

ಅಂತೆಯೇ ಯುವತಿ ವಿರುದ್ಧ ಸ್ಥಳೀಯ ಮಹಿಳಾ ಸಂಘಟನೆಗಳು ಮತ್ತು ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳು ಮಹಿಳೆಯ ವಿರುದ್ಧ ದೂರು ನೀಡಿದ್ದು ಅವರ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಯುವತಿ ಒಳ ಉಡುಪು ಧರಿಸಿ ಅತ್ಯಂತ ಜನ ಭರಿತ ರಸ್ತೆಗಳಾದ ಮೇಘದೂತ್ ಚಾಟ್-ಚೌಪಾಟಿ ಮತ್ತು 56 ಡುಕಾನ್ ಚಾಟ್-ಚೌಪಾಟಿಯಲ್ಲಿ ಸುತ್ತಾಡಿ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಳು. ಈ ವೇಳೆ ಸ್ಥಳೀಯರು ಪ್ರಶ್ನಿಸಿದಾಗ ಆಕೆ ತಾನು ದುಬೈ ನಿವಾಸಿ ಎಂದು ಹೇಳಿಕೊಂಡಿದ್ದಳು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ