ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹಾಗೂ ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ,
ಕುಲ್ಗಾಮ್ ಜಿಲ್ಲೆಯ ದೇವ್‌ಸರ್ ಪ್ರದೇಶದ ಅಧಿಗಾಮ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.
ಈ ವೇಳೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಸ್ಥಳ ಸುತ್ತುವರೆದ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿದ್ದವು. ಈ ವೇಳೆ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹಾಗೂ ಟ್ರಾಫಿಕ್ ಪೊಲೀಸ್ ಅಧಿಕಾರಿಗೆ ಗಾಯಗಳಾಗಿವೆ ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.