ಶ್ರೀನಗರ: ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ರ್ಯಾಲಿಗಳನ್ನು ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಹೇಳಿಕೆಯನ್ನು ವೈರಲ್ ಆಗುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದರು. ಬಳಿಕ ಸುಧಾರಿಸಿಕೊಂಡು ಮಾತನಾಡಲು ಶುರು ಮಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತೆ ಎಂದು ಹೇಳಿದ್ದು ಈ ಹೇಳಿಕೆ ಸದ್ಯ ವೈರಲ್ ಆಗಿದೆ.
ಭಾಷಣ ವೇಳೆ ಅಸ್ವಸ್ಥರಾದ ಮಲ್ಲಿಕಾರ್ಜುನ ಖರ್ಗೆ ಅವರು ನಂತರ ಸುಧಾರಿಸಿಕೊಂಡು ಮತ್ತೆ ಭಾಷಣ ಮಾಡಲು ಶುರು ಮಾಡಿದರು. ಆದರೆ ಭಾಷಣದ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಳವಾಗುತ್ತದೆ ಎಂದು ಹೇಳಿದ್ದರು. ಇದು ತಾಯ್ತಪ್ಪಿನಿಂದ ಹೇಳಿದ್ರಾ? ಉದ್ದೇಶಪೂರ್ವಕವಾಗಿ ಹೇಳಿದ್ರಾ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ. ದೌರ್ಬಲ್ಯದ ಕ್ಷಣದಲ್ಲಿ ಸತ್ಯ ಹೊರಬರುತ್ತದೆ ಎಂದು ಕೆಲವರು ಕಮೆಂಟ್ ಮಾಡುತ್ತಿದ್ದರೆ ಮತ್ತೆ ಕೆಲವರು ಸತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಟ್ವೀಟಿಸುತ್ತಿದ್ದಾರೆ.
ಇದೇ ವೇಳೆ ಜಮ್ಮು ಮತ್ತು ಕಾಶ್ಮೀರಕ್ಕೆ 'ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಹೇಳಿದರು.