ಬಸ್ ಅಪಘಾತದ ಚಿತ್ರ 
ದೇಶ

ಮಧ್ಯಪ್ರದೇಶ: ಬಸ್ ಅಪಘಾತ, ಮೃತರ ಸಂಖ್ಯೆ 9ಕ್ಕೆ ಏರಿಕೆ

ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮೈಹಾರ್‌ನಲ್ಲಿ ನಿಂತಿದ್ದ ಕಲ್ಲು ತುಂಬಿದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ನಂತರ ಸುಮಾರು 20 ಜನರು ಗಾಯಗೊಂಡಿದ್ದರು.

ಮೈಹಾರ್: ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಸಂಭವಿಸಿದ ಖಾಸಗಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಭಾನುವಾರ ಮೃತಪಟ್ಟಿದ್ದು ಮೃತರ ಸಂಖ್ಯೆ9ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮೈಹಾರ್‌ನಲ್ಲಿ ನಿಂತಿದ್ದ ಕಲ್ಲು ತುಂಬಿದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ನಂತರ ಸುಮಾರು 20 ಜನರು ಗಾಯಗೊಂಡಿದ್ದರು.

ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿ. ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಅಪಘಾತ ನಡೆದಿತ್ತು ಎಂದು ಪೊಲೀಸರು ಹೇಳಿದ್ದಾರೆ. ಪ್ರಯಾಗ್‌ರಾಜ್‌ನಿಂದ ರೇವಾ ಮೂಲಕ ನಾಗ್ಪುರಕ್ಕೆ ತೆರಳುತ್ತಿದ್ದ ಬಸ್ ನಾದನ್ ದೇಹತ್ ಪೊಲೀಸ್ ಠಾಣೆ ಬಳಿ ಅಪಘಾತಕ್ಕೀಡಾಗಿರುವುದಾಗಿ ಮೈಹಾರ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರವಾಲ್ ತಿಳಿಸಿದ್ದಾರೆ.

ಈ ಹಿಂದೆ ಆರು ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿತ್ತು. ಆದರೆ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನೂ ಮೂವರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ನಾಲ್ಕು ವರ್ಷದ ಬಾಲಕ ಸೇರಿದಂತೆ ಎಲ್ಲರೂ ಪುರುಷರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT