ಸಾಂದರ್ಭಿಕ ಚಿತ್ರ 
ದೇಶ

ಹರಿಯಾಣ: ಸಚಿವ ರಂಜಿತ್ ಸಿಂಗ್ ಚೌಟಾಲಾ ಸೇರಿದಂತೆ 8 ಬಂಡಾಯ ನಾಯಕರು ಬಿಜೆಪಿಯಿಂದ ಉಚ್ಛಾಟನೆ!

ಚೌಟಾಲಾ ಪಕ್ಷೇತರ ಶಾಸಕರಾಗಿದ್ದಾಗ ವಿಧಾನಸಭೆ ಪ್ರತಿನಿಧಿಸುತ್ತಿದ್ದ ರಾನಿಯಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ನಂತರ ಕೇಸರಿ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ.

ಚಂಡೀಗಢ: ಅಕ್ಟೋಬರ್ 5 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಮತ್ತು ಇತರ ಏಳು ನಾಯಕರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.

ಈ ನಾಯಕರನ್ನು ತಕ್ಷಣವೇ ಜಾರಿಗೆ ಬರುವಂತೆ ಆರು ವರ್ಷಗಳ ಅವಧಿಗೆ ಹರಿಯಾಣ ಬಿಜೆಪಿಯ ಮುಖ್ಯಸ್ಥ ಮೋಹನ್ ಲಾಲ್ ಉಚ್ಚಾಟಿಸಿದ್ದಾರೆ ಎಂದು ಹರಿಯಾಣ ಬಿಜೆಪಿ ಹೇಳಿದೆ.

ಚೌಟಾಲಾ ಪಕ್ಷೇತರ ಶಾಸಕರಾಗಿದ್ದಾಗ ವಿಧಾನಸಭೆ ಪ್ರತಿನಿಧಿಸುತ್ತಿದ್ದ ರಾನಿಯಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ನಂತರ ಕೇಸರಿ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸೇರುವ ಮುನ್ನ ಚೌಟಾಲಾ ವಿಧಾನಸಭೆಯ ಸದಸ್ಯತ್ವವನ್ನು ತೊರೆದಿದ್ದರು. ಅವರು ಹಿಸಾರ್‌ನಿಂದ ಸಂಸತ್ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು.

90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಸತತ ಮೂರನೇ ಅವಧಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT