ಪ್ರಧಾನಿ ಬೆಂಜಮಿನ್ ನೆತನ್ಯಾಹು , ಪ್ರಧಾನಿ ಮೋದಿ 
ದೇಶ

'ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ಮೋದಿ ಮಾತುಕತೆ!

ನೆತನ್ಯಾಹು ಅವರೊಂದಿಗಿನ ಮಾತುಕತೆಯ ವಿವರಗಳನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಾತುಕತೆ ನಡೆಸಿದ್ದಾರೆ. ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ನೆತನ್ಯಾಹು ಅವರೊಂದಿಗಿನ ಮಾತುಕತೆಯ ವಿವರಗಳನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದೇನೆ. ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ಪ್ರಾದೇಶಿಕ ಉದ್ವಿಗ್ನ ಸ್ಥಿತಿಯನ್ನು ತಡೆಗಟ್ಟುವುದು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳುವುದು ಬಹಳ ಮುಖ್ಯ ಎಂದಿದ್ದಾರೆ.

ಶಾಂತಿ ಸ್ಥಾಪಿಸುವ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಬದ್ಧ ಎಂದು ಮೋದಿ ಹೇಳಿದ್ದಾರೆ. ಆದರೆ ಮೋದಿ ಯಾವುದೇ ನಿರ್ದಿಷ್ಟ ಘಟನೆಯನ್ನು ಉಲ್ಲೇಖಿಸಿಲ್ಲ. ಕಳೆದ ವಾರ ಲೆಬನಾನ್‌ನಲ್ಲಿ ನಡೆದ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇಸ್ರೇಲಿ ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆಯ ನಾಯಕ ಹಸನ್ ನಸ್ರಲ್ಲಾ ಸೇರಿದಂತೆ ಏಳು ಉನ್ನತ ಶ್ರೇಣಿಯ ಕಮಾಂಡರ್‌ಗಳು ಮತ್ತು ಅಧಿಕಾರಿಗಳನ್ನು ಹತ್ಯೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT