ಮಲ್ಲಿಕಾರ್ಜುನ ಖರ್ಗೆ ಮತ್ತು ನರೇಂದ್ರ ಮೋದಿ 
ದೇಶ

'ಮೋದಿಯನ್ನು ಅಧಿಕಾರದಿಂದ ಇಳಿಸೋವರೆಗೂ ನಾನು ಸಾಯೊಲ್ಲ' ಎಂದಿದ್ದ Kharge ಆರೋಗ್ಯ ವಿಚಾರಿಸಿದ ಪ್ರಧಾನಿ; 'ಅನಗತ್ಯ' ಎಂದ ಅಮಿತ್ ಶಾ!

ಜಮ್ಮು ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದರು.

ನವದೆಹಲಿ: ನರೇಂದ್ರ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದ ಕುರಿತು ಪ್ರಧಾನಿ ಮೋದಿ ವಿಚಾರಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದರು. ಆದರೆ ತಕ್ಷಣವೇ ಸಾವರಿಸಿಕೊಂಡು ಮಾತು ಮುಂದುವರಿಸಿದ ಮಲ್ಲಿಕಾರ್ಜುನ ಖರ್ಗೆ, ನಾನು ಇಷ್ಟು ಬೇಗ ಸಾಯಲ್ಲ, ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿಯೇ ಸಾಯುವುದು ಎಂದು ಹೇಳಿದ್ದರು. ಅವರ ಈ ಹೇಳಿಕೆ ವೈರಲ್ ಆಗಿತ್ತು.

ಆರೋಗ್ಯ ವಿಚಾರಿಸಿದ ಪ್ರಧಾನಿ!

ಇದರ ಬೆನ್ನಲ್ಲೇ ನಿನ್ನೆ ರಾತ್ರಿ ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ಮೋದಿ ಕರೆ ಮಾಡಿದ್ದು, ಆರೋಗ್ಯ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ವೈಯಕ್ತಿಕವಾಗಿ ಮೋದಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಿದ್ದು ಖರ್ಗೆ ಕೂಡ ಸಕಾರಾತ್ಮಕವಾಗಿಯೇ ಉತ್ತರಿಸಿದ್ದಾರೆ ಎನ್ನಲಾಗಿದೆ.

ವೈಯುಕ್ತಿಕ ಆರೋಗ್ಯ ವಿಚಾರದಲ್ಲಿ ಅನಗತ್ಯವಾಗಿ ಮೋದಿಯನ್ನು ಎಳೆದು ತರುತ್ತಿದ್ದಾರೆ: ಅಮಿತ್ ಶಾ

ಇನ್ನು ಇದೇ ವಿಚಾರವಾಗಿ ಕಿಡಿಕಾರಿರುವ ಕೇಂದ್ರ ಸಚಿವ ಅಮಿತ್ ಶಾ, ಮಲ್ಲಿಕಾರ್ಜುನ ಖರ್ಗೆ ತಮ್ಮ ವೈಯಕ್ತಿಕ ಆರೋಗ್ಯ ವಿಚಾರದಲ್ಲಿ ಅನಗತ್ಯವಾಗಿ ನರೇಂದ್ರ ಮೋದಿ ಅವರನ್ನು ಎಳೆದು ತರುತ್ತಿದ್ದಾರೆ. ಖರ್ಗೆ ಅವರ ಇಂದು ತಮ್ಮ ಭಾಷಣದಲ್ಲಿ ಸಂಪೂರ್ಣ ಅನಗತ್ಯ ವಿಚಾರಗಳನ್ನು ಎತ್ತಿದ್ದಾರೆ. ಇದು ಅವರ ದ್ವೇಷ ಪ್ರದರ್ಶನ ಮಾಡುತ್ತದೆ. ಇದು ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್ ಹೊಂದಿರುವ ದ್ವೇಷ ಮತ್ತು ಭಯವನ್ನು ತೋರಿಸುತ್ತದೆ. ಅವರು ನಿರಂತರವಾಗಿ ಮೋದಿ ಅವರ ಬಗ್ಗೆಯೇ ಯೋಚಿಸುತ್ತಿದ್ದಾರೆ ಎಂದು ಹೇಳಿದರು.

ಅಂತೆಯೇ ಖರ್ಗೆ ಅವರ ಆರೋಗ್ಯ ಬೇಗ ಚೇತರಿಸಲಿ ಎಂದು ನಾನೂ ಪ್ರಾರ್ಥಿಸುತ್ತೇನೆ. ಪ್ರಧಾನಿ ಮೋದಿ ಮತ್ತು ನಾನು, ನಾವೆಲ್ಲರೂ ಖರ್ಗೆ ಅವರು ದೀರ್ಘ, ಆರೋಗ್ಯಕರ ಜೀವನವನ್ನು ನಡೆಸಬೇಕೆಂದು ಪ್ರಾರ್ಥಿಸುತ್ತೇವೆ. ಅವರು ಹಲವು ವರ್ಷಗಳ ಕಾಲ ಬದುಕಲಿ ಮತ್ತು 2047 ರ ವೇಳೆಗೆ ವಿಕಸಿತ ಭಾರತ ನಿರ್ಮಾಣವನ್ನು ನೋಡಲು ಅವರು ಬದುಕಲಿ ಎಂದು ಅಮಿತ್ ಶಾ ಹೇಳಿದರು.

ಬಿಜೆಪಿ ಕಿಡಿ

ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬಗ್ಗೆ ಬಿಜೆಪಿ ತೀವ್ರ ಟೀಕೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಅಮಿತ್ ಶಾ, ಮಲ್ಲಿಕಾರ್ಜುನ ಖರ್ಗೆ ಭಾಷಣದ ಬಗ್ಗೆ ಅವರ ಪಕ್ಷದವರಿಂದಲೇ ಟೀಕೆ ಬಂದಿದೆ. ಖರ್ಗೆ ತಮ್ಮ ಆರೋಗ್ಯ ವಿಚಾರದಲ್ಲಿ ಅನಗತ್ಯವಾಗಿ ಮೋದಿ ಜೀಯವರನ್ನು ಎಳೆದಿದ್ದಾರೆ. ಅವರು ಮೋದಿ ಮೇಲೆ ಎಷ್ಟು ಧ್ವೇಷವಿಟ್ಟುಕೊಂಡಿದ್ದಾರೆ ಎಂದು ಈ ಹೇಳಿಕೆಯಿಂದಲೇ ಗೊತ್ತಾಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video