ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ಕು ಮಕ್ಕಳು ಸೇರಿ ಏಳು ಮಂದಿ ಸಾವು

ಮನೆಯಲ್ಲಿ ಸಂಗ್ರಹಿಸಲಾದ ಪಟಾಕಿಗಳು ಹೊತ್ತಿ ಉರಿದು ಬೆಂಕಿ ವ್ಯಾಪಿಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅವರು ಹೇಳಿದ್ದಾರೆ.

ಕೋಲ್ಕತ್ತ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಪಥರ್ ಪ್ರತಿಮಾದಲ್ಲಿರುವ ಮನೆಯೊಂದರಲ್ಲಿ ಸೋಮವಾರ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ನಾಲ್ವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಥರ್ ಪ್ರತಿಮಾ ಬ್ಲಾಕ್‌ನ ಧೋಲಾಹತ್ ಗ್ರಾಮದಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಮಹಿಳೆ ಕೂಡ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಮನೆಯಿಂದ ಎಲ್ಲಾ ಶವಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ಕೋಟೇಶ್ವರ ರಾವ್ ಪಿಟಿಐಗೆ ತಿಳಿಸಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬದವರಾಗಿರಬಹುದು ಎಂದೂ ಅವರು ಹೇಳಿದ್ದಾರೆ.

ಮನೆಯಲ್ಲಿ ಸಂಗ್ರಹಿಸಲಾದ ಪಟಾಕಿಗಳು ಹೊತ್ತಿ ಉರಿದು ಬೆಂಕಿ ವ್ಯಾಪಿಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅವರು ಹೇಳಿದ್ದಾರೆ. ಮನೆಯೊಳಗೆ ಪಟಾಕಿಗಳನ್ನು ತಯಾರಿಸಲಾಗುತ್ತಿತ್ತೆ? ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಮನೆಯಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳು ಇದ್ದವು ಮತ್ತು ಒಳಗೆ ಸಂಗ್ರಹಿಸಲಾದ ಪಟಾಕಿಗಳಿಗೆ ಬೆಂಕಿ ಹೊತ್ತಿಕೊಂಡ ಕಾರಣ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್