ಲೋಕಸಭೆ 
ದೇಶ

ಲೋಕಸಭೆಯಲ್ಲಿ Waqf Bill ಮಂಡನೆ: 'ವಿಭಜಕ ಮಸೂದೆಯ ವಿರುದ್ಧ ಒಗ್ಗಟ್ಟಾಗಿದ್ದೇವೆ' ಎಂದ ವಿಪಕ್ಷಗಳು, NDA ವಿಪ್ ಜಾರಿ

ಮಂಗಳವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ವಿಧೇಯಕ ಮಂಡನೆ ವಿಷಯವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ವಿಧೇಯಕದ ಕುರಿತು ಉಭಯ ಸದನದಲ್ಲೂ ತಲಾ 8 ಗಂಟೆಗಳ ಕಾಲ ಚರ್ಚೆಗೆ ಸಮಯ ಕಲ್ಪಿಸುವುದಾಗಿ ಸರ್ಕಾರ ಮಾಹಿತಿ ನೀಡಿದೆ.

ನವದೆಹಲಿ: ಭಾರೀ ವಿವಾದಕ್ಕೆ ಕಾರಣವಾಗಿರುವ ವಕ್ಫ್ ತಿದ್ದು ಪಡಿ ವಿಧೇಯಕವನ್ನು ಏ.2ರ ಬುಧವಾರ ಲೋಕಸಭೆಯಲ್ಲಿ ಮತ್ತು ಏ.3ರ ಗುರುವಾರ ರಾಜ್ಯಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಒಳಗೊಂಡ ಎನ್ ಡಿಎ ಮತ್ತು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಮುಂದಿನ 3 ದಿನ ಕಡ್ಡಾಯವಾಗಿ ಕಲಾಪದಲ್ಲಿ ಭಾಗಿಯಾಗಬೇಕು ಎಂದು ಸೂಚಿಸಿ ತಮ್ಮ ಸದಸ್ಯರಿಗೆ ವಿಪ್ ಜಾರಿ ಮಾಡಿವೆ.

ಮಂಗಳವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ವಿಧೇಯಕ ಮಂಡನೆ ವಿಷಯವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ವಿಧೇಯಕದ ಕುರಿತು ಉಭಯ ಸದನದಲ್ಲೂ ತಲಾ 8 ಗಂಟೆಗಳ ಕಾಲ ಚರ್ಚೆಗೆ ಸಮಯ ಕಲ್ಪಿಸುವುದಾಗಿ ಸರ್ಕಾರ ಮಾಹಿತಿ ನೀಡಿದೆ.

ಲೋಕಸಭೆಯಲ್ಲಿ ಸರ್ಕಾರಕ್ಕೆ ಪೂರ್ಣ ಬಹುಮತ ಇರುವ ಕಾರಣ ಬುಧವಾರ ಯಾವುದೇ ಅಡ್ಡಿ ಇಲ್ಲದೇ ವಿಧೇಯಕ ಅಂಗೀಕಾರ ಆಗುವುದು ನಿಶ್ಚಿತವಾಗಿದೆ. ರಾಜ್ಯಸಭೆಯಲ್ಲಿ ಸರ್ಕಾರಕ್ಕೆ ಪೂರ್ಣ ಬಹುಮತ ಇಲ್ಲವಾದರೂ, ಸಂಖ್ಯಾಬಲ ಹೊಂದಿಸುವಲ್ಲಿ ಪರಿಣತಿ ಹೊಂದಿರುವ ಸರ್ಕಾರ, ಅಲ್ಲೂ ವಿಧೇಯಕ ಅಂಗೀಕಾರದ ವಿಶ್ವಾಸದಲ್ಲಿದೆ. ಈ ನುವೆ ಎನ್‌ಡಿಎ ಮೈತ್ರಿಕೂಟದ ಎರಡು ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರದ ಹುಮ್ಮಸ್ಸನ್ನು ಹೆಚ್ಚಿಸಿದೆ.

ಇನ್ನು ವಿಧೇಯಕ ಕುರಿತು ಹಿಂದಿನಿಂದಲೂ ಬಲವಾದ ವಿರೋಧ ವ್ಯಕ್ತಪಡಿಸಿ ಕೊಂಡೇ ಬಂದಿದ ವಿಪಕ್ಷಗಳು, ಮುಂದಿನ 3 ದಿನಗಳ ಕಾಲ ಸಂಸತ್ತಿನ ಉಭಯ ಸದನಗ ಳಲ್ಲೂ ಪ್ರಬಲ ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ. ಹೀಗಾಗಿ ಉಭಯ ಸದನಗ ಇಲ್ಲೂ ಭಾರೀ ಕೋಲಾಹಲ ನಿರೀಕ್ಷೆ ಇದೆ.

ಮಂಗಳವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಹಾಜರಿದ್ದ ವಿಪಕ್ಷಗಳ ಸದಸ್ಯರು ಸದಸ್ಯರು 12 ಗಂಟೆಗಳ ಅವಕಾಶಕ್ಕೆ ಮನವಿ ಮಾಡಿದರು. ಆದರೆ, ಬೇಡಿಕೆ ತಿರಸ್ಕರಿಸಿದ ಸರ್ಕಾರ, ಮತ್ತೊಂದು ಮಹತ್ವದ ವಿಷಯವಾದ ಮಣಿಪುರದ ಕುರಿತೂ ಬುಧವಾರ ಚರ್ಚೆಗೆ ಅವಕಾಶ ನೀಡಬೇಕಿದೆ. ಹೀಗಾಗಿ ವಕ್ಸ್ ತಿದ್ದುಪಡಿ ವಿಧೇಯಕದ ಕುರಿತು 8 ಗಂಟೆಗಳ ಚರ್ಚೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿತು. ಹೀಗಾಗಿ ವಿಪಕ್ಷಗಳ ಸದಸ್ಯರು ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ.

ಸಭೆಯ ಬಳಿಕ ಮಾತನಾಡಿದ ಸಂಸದೀಯ ಖಾತೆ ಸಚಿವ ಕಿರಣ್‌ ರಿಜಿಜು ಅವರು, 'ಚರ್ಚೆಗೆ ಸಾಕಷ್ಟು ಸಮಯ ನೀಡಲಾಗಿದೆ. ಒಂದು ವೇಳೆ ಈ ಅವಧಿ ಸಾಲದಿದ್ದರೆ, ಸರ್ವಪಕ್ಷಗಳ ಅಭಿಪ್ರಾಯದಂತೆ ಅವಧಿ ವಿಸ್ತರಣೆಗೆ ಸರ್ಕಾರ ಸಿದ್ಧವಿದೆ. ಆದರೆ, ಒಂದು ವೇಳೆ ಪ್ರತಿಪಕ್ಷಗಳು ಯಾವುದೋ ಕಾರಣ ನೀಡಿ ಚರ್ಚೆಯಿಂದ ಪಲಾಯನ ಮಾಡಿದರೆ ನಾವು ಏನೂ ಮಾಡಲು ಸಾಧ್ಯವಿಲ್ಲ. ನಾವು ವಿಧೇಯಕದ ಚರ್ಚೆಯಾಗಬೇಕು' ಎಂದು ಬಯಸುತ್ತೇವೆಂದು ಹೇಳಿದರು.

'ವಿಭಜಕ ಮಸೂದೆಯ ವಿರುದ್ಧ ಒಗ್ಗಟ್ಟಾಗಿದ್ದೇವೆ: ಖರ್ಗೆ

ವಕ್ಫ್ ತಿದ್ದುಪಡಿ ಮಸೂದೆ "ವಿಭಜಕ" ಮತ್ತು ಸಂವಿಧಾನಬಾಹಿರವಾಗಿದ್ದು, ಇದರ ವಿರುದ್ಧ ವಿರೋಧ ಪಕ್ಷಗಳೂ ಒಗ್ಗೂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆಯವರು ಹೇಳಿದ್ದಾರೆ.

"ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರದ ಸಂವಿಧಾನಬಾಹಿರ ಮತ್ತು ವಿಭಜಕ ಕಾರ್ಯಸೂಚಿಯನ್ನು ಸೋಲಿಸಲು ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಸಂಸತ್ತಿನಲ್ಲಿ ಒಟ್ಟಾಗಿ ಕೆಲಸ ಮಾಡುತ್ತವೆ" ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಾತನಾಡಿ, ಇಂಡಿಯಾ ಕೂಟ ಮಸೂದೆಗೆ ವಿರೋಧ ವ್ಯಕ್ತಪಡಿಸಲಿದೆ ಎಂದು ಹೇಳಿದರು.

ಆರಂಭಿಕ ಹಂತದಲ್ಲಿಯೇ ಇಂಡಿಆ ಮೈತ್ರಿಕೂಟ ಮತ್ತು ಇತರೆ ಎಲ್ಲಾ ಪಕ್ಷಗಳು ಮಸೂದೆ ಬಗ್ಗೆ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಿವೆ. ಈ ಮಸೂದೆಯು ಗುರಿಯಿಟ್ಟುಕೊಂಡ ಶಾಸನವಾಗಿದ್ದು, ಸಾಂವಿಧಾನಿಕ ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದರು.

ನಾವು ಈ ಮಸೂದೆಯನ್ನು ವಿರೋಧಿಸಲಿದ್ದೇವೆ. ಈ ನಿರ್ಧಾರವನ್ನು ಇಂಡಿಯಾ ಮೈತ್ರಿಕೂಟ ಪಕ್ಷಗಳು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಇತರ ಸಮಾನ ಮನಸ್ಕ ಪಕ್ಷಗಳು ಕೂಡ ಈ ಮಸೂದೆಯ ವಿರುದ್ಧ ಮತ ಚಲಾಯಿಸುವಂತೆ ನಾವು ವಿನಂತಿಸುತ್ತೇವೆಂದು ತಿಳಿಸಿದ್ದಾರೆ.

ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಮಾತನಾಡಿ. ವಿರೋಧ ಪಕ್ಷಗಳು ಚರ್ಚೆಯಲ್ಲಿ ಭಾಗವಹಿಸುತ್ತವೆಯಾದರೂ, ಮಸೂದೆಯ ವಿರುದ್ಧ ಮತ ಚಲಾಯಿಸುತ್ತವೆ ಎಂದು ಹೇಳಿದ್ದಾರೆ.

ಸಿಪಿಐ (ಎಂ) ನಾಯಕ ಜಾನ್ ಬ್ರಿಟಾಸ್ ಅವರು ಮಾತನಾಡಿ. ಚರ್ಚೆಯ ಸಮಯದಲ್ಲಿ ವಿರೋಧ ಪಕ್ಷಗಳು "ಮಸೂದೆಯನ್ನು ತೀವ್ರವಾಗಿ ವಿರೋಧಿಸಲಿವೆ ಎಂದು ಹೇಳಿದರು.

ಏನಿದು ವಕ್ಫ್ ಮಸೂದೆ?

1923ರಲ್ಲಿ ಮೊದಲ ಬಾರಿಗೆ ವಕ್ಫ್ ಮಂಡಳಿ ಕಾಯ್ದೆ ಜಾರಿಗೆ ಬಂತು. ಇದಕ್ಕೆ 1995ರಲ್ಲಿ ತಿದ್ದುಪಡಿ ತರಲಾಯಿತು. ಇದರ ಅನ್ವಯ ಯಾವುದೇ ವ್ಯಕ್ತಿ ಧಾರ್ಮಿಕ ಕಾರಣಕ್ಕೆ ದಾನ ಮಾಡಿದ ಆಸ್ತಿ ವಕ್ಫ್ ಆಸ್ತಿ ಎನಿಸಿಕೊಳ್ಳುತ್ತದೆ. 2013ರಲ್ಲಿ ಯುಪಿಎ ಸರಕಾರ ಇದಕ್ಕೆ ಕೊಂಚ ಬದಲಾವಣೆ ತಂದು, ಆಸ್ತಿಯನ್ನು ಭಾರತೀಯ ಪುರಾತತ್ವ ಇಲಾಖೆ ಮತ್ತು ವಕ್ಫ್ ಬೋರ್ಡ್‌ ನಡುವೆ ಹಂಚಿಕೆ ಮಾಡಲು ಯತ್ನಿಸಿತ್ತು. ಈಗ ಕೇಂದ್ರ ಸರಕಾರ ವಕ್ಫ್ ಆಸ್ತಿಯಲ್ಲಿ ಆಗುತ್ತಿರುವ ಅಕ್ರಮವನ್ನು ತಡೆಗಟ್ಟಲು ಇದರ ಪರಿಶೀಲನೆಗೆ ಮುಂದಾಗಿದೆ. 40 ತಿದ್ದುಪಡಿಗಳೊಂದಿಗೆ ಹೊಸ ಮಸೂದೆಯನ್ನು ಕೇಂದ್ರ ಮಂಡಿಸುತ್ತಿದೆ.

ತಿದ್ದುಪಡಿಗೆ ವಿರೋಧವೇಕೆ?

ವಕ್ಫ್ ತಿದ್ದುಪಡಿ ಮಸೂದೆಗೆ ಮುಸ್ಲಿಂ ಸಂಘಟನೆಗಳ ಸಹಿತ ವಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ. ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರ ಸದಸ್ಯರಿಗೂ ಅವಕಾಶ ಒದಗಿಸುತ್ತಿರುವುದರಿಂದ ಈ ಆಸ್ತಿಗಳನ್ನು ಕಬಳಿಸಿಕೊಳ್ಳಲು ಸರಕಾರ ಮುಂದಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೆ ಮಸೂದೆ ಅಂಗೀಕಾರವಾದರೆ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗವಿದೆ ಎಂದು ವಿಪಕ್ಷಗಳು ಆರೋಪಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT