ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಸುಪ್ರೀಂ ಕೋರ್ಟ್ ತೀರ್ಪು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಆದರೆ...: ಪಶ್ಚಿಮ ಬಂಗಾಳ ಸಿಎಂ ಮಮತಾ

ಸುಪ್ರೀಂ ಕೋರ್ಟ್ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 25,753 ಶಿಕ್ಷಕರು ಮತ್ತು ಇತರ ಸಿಬ್ಬಂದಿ ನೇಮಕಾತಿಯನ್ನು ಅಮಾನ್ಯಗೊಳಿಸಿದೆ.

ಕೋಲ್ಕತ್ತಾ: ನ್ಯಾಯಾಂಗದ ಬಗ್ಗೆ ನನಗೆ ಅತ್ಯುನ್ನತ ಗೌರವ ಇದೆ. ಆದರೆ ಶಾಲಾ ಶಿಕ್ಷಕರ ನೇಮಕಾತಿ ಅಮಾನ್ಯಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 25,753 ಶಿಕ್ಷಕರು ಮತ್ತು ಇತರ ಸಿಬ್ಬಂದಿ ನೇಮಕಾತಿಯನ್ನು ಅಮಾನ್ಯಗೊಳಿಸಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಮತಾ, "ನ್ಯಾಯಾಂಗ ಮತ್ತು ನ್ಯಾಯಾಧೀಶರ ಬಗ್ಗೆ ನನಗೆ ಅತ್ಯುನ್ನತ ಗೌರವ ಇದ್ದರೂ, ಮಾನವೀಯ ದೃಷ್ಟಿಕೋನದಿಂದ ನಾನು ಈ ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.

ಆದಾಗ್ಯೂ, ತಮ್ಮ ಸರ್ಕಾರು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುವುದರ ಜತೆಗೆ ಎಲ್ಲಾ ರೀತಿಯ ಕಾನೂನು ಆಯ್ಕೆಗಳನ್ನು ಪರಿಶೀಲಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

"ನಾವು ತೀರ್ಪನ್ನು ಒಪ್ಪಿಕೊಳ್ಳಬೇಕು ಮತ್ತು ಕಾನೂನುಬದ್ಧವಾಗಿ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ" ಎಂದು ಪಶ್ಚಿಮ ಬಂಗಾಳ ಸಿಎಂ ತಿಳಿಸಿದ್ದಾರೆ.

ಇದೇ ವೇಳೆ ಉದ್ಯೋಗ ಕಳೆದುಕೊಂಡವರನ್ನು ಭೇಟಿ ಮಾಡುವುದಾಗಿ ತಿಳಿಸಿದ ಸಿಎಂ, ಭರವಸೆ ಕಳೆದುಕೊಳ್ಳಬೇಡಿ ಎಂದು ನಾನು ಅವರಿಗೆ ಹೇಳುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT