ನಿತೀಶ್ ಕುಮಾರ್ 
ದೇಶ

ವಕ್ಫ್ ತಿದ್ದುಪಡಿ ಮಸೂದೆಗೆ ಬೆಂಬಲ: ಜೆಡಿಯು ನಲ್ಲಿ ಭಿನ್ನಮತ ಸ್ಫೋಟ; ನಿತೀಶ್ ವಿರುದ್ಧ ತಿರುಗಿಬಿದ್ದ ಮುಸ್ಲಿಂ ನಾಯಕರು; ರಾಜಿನಾಮೆ!

ಹಿರಿಯ ನಾಯಕ ಮೊಹಮ್ಮದ್ ಖಾಸಿಂ ಅನ್ಸಾರಿ ಗುರುವಾರ ಪಕ್ಷ ಮತ್ತು ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಪಾಟ್ನಾ: ಲೋಕಸಭೆಯಲ್ಲಿ ಬುಧವಾರ ಅಂಗೀಕಾರಗೊಂಡ ವಕ್ಫ್ ತಿದ್ದುಪಡಿ ಮಸೂದೆ 2024ಕ್ಕೆ ಬೆಂಬಲ ನೀಡಿದ ನಂತರ ಜೆಡಿಯುನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಹಲವು ಮುಸ್ಲಿಂ ನಾಯಕರು ನಿತೀಶ್ ಕುಮಾರ್ ವಿರುದ್ಧ ತಿರುಗಿಬಿದಿದ್ದಾರೆ.

ಹಿರಿಯ ನಾಯಕ ಮೊಹಮ್ಮದ್ ಖಾಸಿಂ ಅನ್ಸಾರಿ ಗುರುವಾರ ಪಕ್ಷ ಮತ್ತು ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ನಿಲುವು ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯುತ್ತದೆ ಎಂದು ನಂಬಿದ್ದ ಲಕ್ಷಾಂತರ ಭಾರತೀಯ ಮುಸ್ಲಿಮರ ನಂಬಿಕೆಯನ್ನು ಛಿದ್ರಗೊಳಿಸಿದೆ ಎಂದು ಅವರು ನಿತೀಶ್ ಕುಮಾರ್ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಅನ್ಸಾರಿ ಅವರಂತೆ ಜೆಡಿಯುನ ಹಲವಾರು ಮುಸ್ಲಿಂ ನಾಯಕರು ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಷಯದ ಬಗ್ಗೆ ಕಾನೂನು ಅಭಿಪ್ರಾಯವನ್ನು ಪಡೆಯುವುದಾಗಿ ಹೇಳಿದ್ದಾರೆ. ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯ ನಂತರ ಅವರು ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಜೆಡಿಯು ಬೆಂಬಲವನ್ನು ನೀಡಿದ ನಂತರ ನಾವು ವಂಚನೆಗೊಳಗಾಗಿದ್ದೇವೆ. ಈಗ ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲದಂತಾಗಿದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಮತ್ತು ಜೆಡಿಯು ಪ್ರಧಾನ ಕಾರ್ಯದರ್ಶಿ ಗುಲಾಂ ರಸೂಲ್ ಬಲ್ಯಾವಿ ಹೇಳಿದ್ದಾರೆ.

ಎರಡಾ-ಎ-ಶರಿಯಾ ಪರವಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) 31 ಪುಟಗಳ ಸಲಹೆಯನ್ನು ಸಲ್ಲಿಸಿದ್ದೆ. ಲೋಕಸಭೆಯಲ್ಲಿ ಮಸೂದೆ ಮಂಡನೆಯಾಗುವ ಮುನ್ನಾ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದ್ದೆ. ಆದರೆ, ಅವರ ಸಲಹೆಗಳಿಗೆ ಜೆಪಿಸಿ ಅಥವಾ ಸಿಎಂ ನಿತೀಶ್‌ ಕಿವಿಗೊಡಲಿಲ್ಲ.

ಈ ಸಂಬಂಧ ಶೀಘ್ರದಲ್ಲೇ ನಾವು ಎರಾಡಾ-ಎ-ಶರಿಯಾ (ಬಿಹಾರ, ಜಾರ್ಖಂಡ್ ಮತ್ತು ಒಡಿಶಾ) ಸಭೆಯನ್ನು ಕರೆಯಲಿದ್ದೇವೆ. ತದನಂತರ ಮುಂದಿನ ಕ್ರಮವನ್ನು ಕೈಗೊಳ್ಳಲಿದ್ದೇವೆ. ಅಲ್ಲದೇ ನ್ಯಾಯಾಲಯದಲ್ಲಿ ಮಸೂದೆಯನ್ನು ಪ್ರಶ್ನಿಸಲು ನಾವು ಕಾನೂನು ತಜ್ಞರೊಂದಿಗೆ ಸಂಪರ್ಕದಲ್ಲಿದ್ದೇವೆ" ಎಂದು ಅವರು ಗುರುವಾರ ಪಾಟ್ನಾದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಬಲ್ಯಾವಿ ಮಾತ್ರವಲ್ಲ. ಜೆಡಿಯು ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಮತ್ತು ಬಿಹಾರ ವಿಧಾನ ಪರಿಷತ್ತಿನ ಉಪಾಧ್ಯಕ್ಷ ಸಲೀಂ ಪರ್ವೇಜ್ ಅವರು ಶೀಘ್ರದಲ್ಲೇ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಮಸೂದೆಯ ಬಗ್ಗೆ ಪಕ್ಷದ ಮುಸ್ಲಿಂ ಮುಖಂಡರ ಅಸಮಾಧಾನವನ್ನು ತಿಳಿಸುವುದಾಗಿ ಹೇಳಿದ್ದಾರೆ.

ಇದಕ್ಕೂ ಮುನ್ನಾ ಮಾತನಾಡಿದ ಜೆಡಿಯು ಎಂಎಲ್ ಸಿ ಗುಲಾಮ್ ಹಾಗೂ ಮಾಜಿ ಸಂಸದ ಅನ್ಸಾಫ್ ಕರಿಮ್ ಅವರು ವಕ್ಫ್ ತಿದ್ದುಪಡಿ ಕುರಿತ ಜೆಡಿಯುನ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಿತೀಶ್ ಕುಮಾರ್ ಅವರ ನಡೆಯಿಂದ ನಾವು ಆಘಾತಗೊಂಡಿದ್ದೇವೆ ಎಂದು ಅವರು ಹೇಳಿದರು.

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೂಡಾ ಮುಸ್ಲಿಂ ನಾಯಕರು ಜೆಡಿಯುನಿಂದ ಹೊರಬರುವಂತೆ ಮನವಿ ಮಾಡಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದ ಪಕ್ಷದ ನಿಲುವು ಖಂಡಿಸಿ ಹಲವು ಜೆಡಿಯು ನಾಯಕರು ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!