ನವದೆಹಲಿ: ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಅಧಿಕಾರ ಸ್ವೀಕರಿಸಿದ ಕೂಡಲೇ ಸಾರ್ವಜನಿಕವಾಗಿ ತಮ್ಮ ಆಸ್ತಿ ಘೋಷಣೆ ಮಾಡುವುದಾಗಿ ಸುಪ್ರೀಂ ಕೋರ್ಟ್‌ನ ಎಲ್ಲ ನ್ಯಾಯಾಧೀಶರು ಒಪ್ಪಿಕೊಂಡಿದ್ದಾರೆ.
ಫುಲ್ ಕೋರ್ಟ್ ಸಭೆಯಲ್ಲಿ (ಎಲ್ಲ ನ್ಯಾಯಾಧೀಶರು ಹಾಜರಿರುವ ಸಭೆ) ತಮ್ಮ ಆಸ್ತಿಗಳನ್ನು ಬಹಿರಂಗಪಡಿಸಲು ನ್ಯಾಯಾಧೀಶರು ನಿರ್ಧರಿಸಿದ್ದು, ಈ ಮಾಹಿತಿಯನ್ನು ಸುಪ್ರೀಂ ಕೋರ್ಟಿನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.
ನ್ಯಾಯಾಧೀಶರು ಸ್ವಯಂ ಪ್ರೇರಿತರಾಗಿ ವೆಬ್‌ಸೈಟ್‌ನಲ್ಲಿ ಆಸ್ತಿ ಘೋಷಣೆ ಮಾಡಲಿದ್ದಾರೆ. 'ಇದು ಭಾರತದ ಮುಖ್ಯ ನ್ಯಾಯಮೂರ್ತಿಗಳ ಘೋಷಣೆಗಳನ್ನು ಸಹ ಒಳಗೊಂಡಿದೆ ಎಂದು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದ್ದು, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಸೇರಿದಂತೆ ಮೂವತ್ತು ನ್ಯಾಯಾಧೀಶರು ತಮ್ಮ ಆಸ್ತಿಯ ವಿವರಗಳನ್ನು ಹಂಚಿಕೊಂಡಿದ್ದಾರೆ.
'ನ್ಯಾಯಾಧೀಶರು ಅಧಿಕಾರ ವಹಿಸಿಕೊಳ್ಳುವಾಗ ತಮ್ಮ ಆಸ್ತಿ ಘೋಷಣೆಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ಸಲ್ಲಿಸಬೇಕು ಮತ್ತು ದೊಡ್ಡ ಪ್ರಮಾಣದ ಆಸ್ತಿಯನ್ನು ಖರೀದಿಸಿದಾಗಲೂ ಸಿಜೆಐಗೆ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ಪೂರ್ಣ ಪ್ರಮಾಣದ ನ್ಯಾಯಾಲಯದ ಸಭೆಯಲ್ಲಿ ನಿರ್ಧರಿಸಲಾಗಿದೆ.