ಸೋನಿಯಾ ಗಾಂಧಿ  
ದೇಶ

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ಮೇಲೆ 'ಲಜ್ಜೆಗೆಟ್ಟ ದಾಳಿ'ಯಾಗಿದೆ: ಸೋನಿಯಾ ಗಾಂಧಿ

ಸಂವಿಧಾನ ಕಾಗದದ ಮೇಲೆಯೇ ಉಳಿಯುತ್ತಿದ್ದು ಅದನ್ನು ಕೆಡವುದು ಸರ್ಕಾರದ ಉದ್ದೇಶವಾಗಿದೆ ಎಂದು ವಾಗ್ದಾಳಿ ನಡೆಸಿದರು.

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ ಸಂವಿಧಾನದ ಮೇಲಿನ ಲಜ್ಜೆಗೆಟ್ಟ ದಾಳಿ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಬಣ್ಣಿಸಿದ್ದಾರೆ. ಇದು ಸಮಾಜವನ್ನು ಶಾಶ್ವತ ಧ್ರುವೀಕರಣ ಸ್ಥಿತಿಯಲ್ಲಿಡುವ ಬಿಜೆಪಿಯ ಕಾರ್ಯತಂತ್ರದ ಭಾಗವಾಗಿದೆ ಎಂದು ಟೀಕಿಸಿದ್ದಾರೆ.

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಿಸಿದ ಕೆಲವೇ ಗಂಟೆಗಳಲ್ಲಿ, ಮಸೂದೆಯನ್ನು ಕೆಳಮನೆಯಲ್ಲಿ ಅಂಗೀಕರಿಸಲಾಗಿದೆ. ದೆಹಲಿಯ ಸಂವಿಧಾನ ಸದನದಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯು ಸಂವಿಧಾನವನ್ನು ಬುಡಮೇಲು ಮಾಡುವ ಮತ್ತೊಂದು ತಂತ್ರವಾಗಿದ್ದು, ಪಕ್ಷವು ಅದನ್ನು ಬಲವಾಗಿ ವಿರೋಧಿಸುತ್ತದೆ ಎಂದು ಹೇಳಿದರು.

ಅದು ಶಿಕ್ಷಣವಾಗಿರಲಿ, ನಾಗರಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯ ವಿಷಯವಾಗಿರಲಿ, ನಮ್ಮ ಒಕ್ಕೂಟ ರಚನೆ ಅಥವಾ ಚುನಾವಣೆಗಳನ್ನು ನಡೆಸುವುದು, ಮೋದಿ ಸರ್ಕಾರವು ದೇಶವನ್ನು ಪ್ರಪಾತಕ್ಕೆ ಬೀಳಿಸುತ್ತದೆ. ಸಂವಿಧಾನ ಕಾಗದದ ಮೇಲೆಯೇ ಉಳಿಯುತ್ತಿದ್ದು ಅದನ್ನು ಕೆಡವುದು ಸರ್ಕಾರದ ಉದ್ದೇಶವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ಸರ್ಕಾರದ ವೈಫಲ್ಯ ಮತ್ತು ಭಾರತವನ್ನು ನಿಗಾ ರಾಜ್ಯವನ್ನಾಗಿ ಪರಿವರ್ತಿಸುವ ಉದ್ದೇಶವನ್ನು ಬಹಿರಂಗಪಡಿಸಲು ನಾವೆಲ್ಲರೂ ಸರಿಯಾದ ಮತ್ತು ನ್ಯಾಯಯುತ ಹೋರಾಡುವುದನ್ನು ಮುಂದುವರಿಸುವುದು ಅತ್ಯಗತ್ಯ ಎಂದು ಸಂಸದರಿಗೆ ಸೋನಿಯಾ ಗಾಂಧಿ ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಪಕ್ಷದ ಸಂಸದರು ಸಭೆಯಲ್ಲಿ ಹಾಜರಿದ್ದರು.

2004-2014ರ ಅವಧಿಯಲ್ಲಿ ತೆಗೆದುಕೊಂಡ ಹಲವಾರು ಉಪಕ್ರಮಗಳನ್ನು ಪ್ರಧಾನಿಯವರು ತಮ್ಮ ವೈಯಕ್ತಿಕ ಸಾಧನೆಗಳೆಂದು ಮರುಬ್ರಾಂಡ್ ಮಾಡಿದ್ದಾರೆ ಮತ್ತು ಮಾರಾಟ ಮಾಡಿದ್ದಾರೆ. ಅದನ್ನೂ ನಮ್ಮದೇ ಆದ ಸಾರ್ವಜನಿಕ ಸಂಪರ್ಕ ಚಟುವಟಿಕೆಗಳ ಮೂಲಕ ಬಹಿರಂಗಪಡಿಸಬೇಕಾಗಿದೆ ಎಂದು ಅವರು ಪ್ರತಿಪಾದಿಸಿದರು.

ಸಂಸತ್ತಿನ ಎರಡೂ ಸದನಗಳ ಕಾರ್ಯನಿರ್ವಹಣೆಯ ಕುರಿತು ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶವಿಲ್ಲ. ಕಾಂಗ್ರೆಸ್ ತಮ್ಮ ಸಮಸ್ಯೆಗಳನ್ನು ಎತ್ತಲು ಅವಕಾಶ ನೀಡದಂತೆ ಆಡಳಿತ ಪಕ್ಷ ಆಗಾಗ್ಗೆ ಗೊಂದಲಗಳನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

12 ಗಂಟೆಗಳ ಚರ್ಚೆಯ ನಂತರ ಲೋಕಸಭೆಯು ಮಧ್ಯರಾತ್ರಿಯ ನಂತರ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿತು.ವಿರೋಧ ಪಕ್ಷದ ಸದಸ್ಯರು ತಂದ ಎಲ್ಲಾ ತಿದ್ದುಪಡಿಗಳನ್ನು ಧ್ವನಿ ಮತಗಳಿಂದ ತಿರಸ್ಕರಿಸಿದ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಮಸೂದೆ ಪರವಾಗಿ 288 ಮತ್ತು ವಿರುದ್ಧ 232 ಮತಗಳ ವಿಭಜನೆಯ ನಂತರ ಇದನ್ನು ಅಂಗೀಕರಿಸಲಾಯಿತು. ಮಸೂದೆ ಇಂದು ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT