ಪ್ರಧಾನಿ ಮೋದಿ- ಮುಹಮ್ಮದ್ ಯೂನಸ್  online desk
ದೇಶ

ಹಿಂದೂಗಳ ಭದ್ರತೆ ಮುಖ್ಯ, ಭಾರತ- ಬಾಂಗ್ಲಾ ದೇಶದ ಸಂಬಂಧಗಳು ಹಾಳಾದರೆ...: Muhammad Yunus ಗೆ Narendra Modi ಕಠಿಣ ಸಂದೇಶ!

"ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ" ಎಂದು ವಿಕ್ರಮ್ ಮಿಸ್ರಿ ಹೇಳಿದ್ದಾರೆ.

ಥೈಲ್ಯಾಂಡ್‌: ಥೈಲ್ಯಾಂಡ್‌ನಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರೊಂದಿಗಿನ ಪ್ರಧಾನಿ ಮೋದಿ ಅವರ ಭೇಟಿಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ.

"ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ" ಎಂದು ವಿಕ್ರಮ್ ಮಿಸ್ರಿ ಹೇಳಿದ್ದಾರೆ.

ಬಾಂಗ್ಲಾದೇಶದೊಂದಿಗೆ ಸಕಾರಾತ್ಮಕ ಮತ್ತು ರಚನಾತ್ಮಕ ಸಂಬಂಧವನ್ನು ರೂಪಿಸುವ ಭಾರತದ ಬಯಕೆಯನ್ನು ಈ ಸಂದರ್ಭದಲ್ಲಿ ಒತ್ತಿ ಹೇಳಿದ್ದು, ಉತ್ತಮ ಸಂಬಂಧದ ಪರಿಸರವನ್ನು ಕಲುಷಿತಗೊಳಿಸುವ ಯಾವುದೇ ಹೇಳಿಕೆಗಳು, ಮಾತುಗಳನ್ನು ತಪ್ಪಿಸುವುದು ಉತ್ತಮ ಎಂದು ಪ್ರಧಾನಿ ಮೋದಿ ಸಂದೇಶ ರವಾನಿಸಿದ್ದರೆ ಎಂದು ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

"ಗಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಜಾರಿ ಮತ್ತು ಗಡಿ ಭದ್ರತೆ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಅಕ್ರಮ ಗಡಿ ದಾಟುವಿಕೆಯನ್ನು ತಡೆಗಟ್ಟುವುದು ಅಗತ್ಯವಾಗಿದೆ. ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಭಾರತದ ಕಳವಳಗಳನ್ನು ಪ್ರಧಾನಿ ಒತ್ತಿ ಹೇಳಿದ್ದಾರೆ" ಎಂದು ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್