ಅಣ್ಣಾಮಲೈ online desk
ದೇಶ

Tamil Nadu: BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; Annamalai ರಾಜೀನಾಮೆ ಸುಳಿವು?

ಕೊಯಮತ್ತೂರಿನಲ್ಲಿ (Coimbatore) ಮಾತನಾಡಿದ ಅಣ್ಣಾಮಲೈ, ಬಿಜೆಪಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಹೇಳಿದ್ದಾರೆ.

ಕೊಯಂಬತ್ತೂರು: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ (K Annamalai) ಘೋಷಿಸಿದ್ದಾರೆ. ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಿರೀಕ್ಷೆಯಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಘೋಷಿಸಿದ್ದಾರೆ.

ಕೊಯಮತ್ತೂರಿನಲ್ಲಿ (Coimbatore) ಮಾತನಾಡಿದ ಅಣ್ಣಾಮಲೈ, ಬಿಜೆಪಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಹೇಳಿದ್ದಾರೆ. ಮುಂದಿನ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದು ಅಣ್ಣಾಮಲೈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದ್ದು, ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಎಂದು ಅಣ್ಣಾಮಲೈ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಎಐಎಡಿಎಂ ಕೆ-ಬಿಜೆಪಿ 2026 ರ ಚುನಾವಣೆ ದೃಷ್ಟಿಯಿಂದ ಮೈತ್ರಿಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಚುರುಕುಗೊಂಡ ರಾಜಕೀಯ ಲೆಕ್ಕಾಚಾರಗಳಿಂದಾಗಿ ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನ ತೊರೆದಿದ್ದಾರೆ. ಎಐಎಡಿಎಂ ಕೆ-ಬಿಜೆಪಿ ಎರಡೂ ಪಕ್ಷಗಳಿಗೆ ಒಂದೇ ಸಮುದಾಯದಿಂದ (ಗೌಡರ್ ಸಮುದಾಯದ) ನಾಯಕರಿದ್ದ ಕಾರಣಕ್ಕೆ ಬಿಜೆಪಿ ಅಧ್ಯಕ್ಷರ ಬದಲಾವಣೆಗೆ ಎಐಎಡಿಎಂಕೆ ಪಟ್ಟು ಹಿಡಿದಿತ್ತು ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT