ಸಾಂದರ್ಭಿಕ ಚಿತ್ರ 
ದೇಶ

ನಕಲಿ ಕಲಬೆರಕೆ ಪನ್ನೀರ್: ಕ್ರಮಕ್ಕೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವರಿಗೆ ಪ್ರಲ್ಹಾದ್ ಜೋಶಿ ಪತ್ರ

ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ(NCH) ವ್ಯಾಪಕ ದೂರುಗಳು ಬರುತ್ತಿವೆ

ನವದೆಹಲಿ: ದೇಶಾದ್ಯಂತ ಮಾರುಕಟ್ಟೆಯಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್‌ ಮಾರಾಟವಾಗುತ್ತಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಬೆಳಕು ಚೆಲ್ಲಿದ್ದಾರೆ.

ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ(NCH) ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ದೇಶದ ಮಾರುಕಟ್ಟೆಗಳಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟದ ಬಗ್ಗೆ ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಅನೇಕ ದೂರುಗಳನ್ನು ಸ್ವೀಕರಿಸಿದೆ. ಹೀಗಾಗಿ ಇದರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ಆರೋಗ್ಯ ಸಚಿವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ದೇಶಾದ್ಯಂತ ಫಾಸ್ಟ್ ಫುಡ್ ಕೇಂದ್ರಗಳು, ರೆಸ್ಟೋರೆಂಟ್‌ಗಳು ಮತ್ತಿತರೆಡೆ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮಾಡಲಾಗುತ್ತಿದೆ. ವಿಶೇಷವಾಗಿ ಪನೀರ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥವಾಗಿದ್ದರಿಂದ ಇದನ್ನು ಗಮನಿಸಿರುವ ಸಾರ್ವಜನಿಕರು ಗ್ರಾಹಕ ಸಹಾಯವಾಣಿ ಮೂಲಕ ವ್ಯಾಪಕವಾಗಿ ದೂರು ಸಲ್ಲಿಸಿದ್ದಾರೆ. ಕಲಬೆರಕೆ ಪನೀರ್‌ ಸೇವನೆಯಿಂದ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಗ್ರಾಹಕರು ನೀಡಿದ ದೂರಿನಲ್ಲಿ ತೀವ್ರ ಕಳವಳ ಸಹ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, ಆಹಾರ ಗುಣಮಟ್ಟ ಮತ್ತು ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನರ ದುಗುಡವನ್ನು ತಮ್ಮ ಗಮನಕ್ಕೆ ತರಬಯಸಿದ್ದೇನೆ ಎಂದು ಸಚಿವ ಜೋಶಿ ಅವರು ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದಾರೆ.

ಗ್ರಾಹಕರು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಪೋರ್ಟಲ್‌ನಲ್ಲಿ ಹಲವಾರು ದೂರುಗಳನ್ನು ದಾಖಲಿಸಿದ್ದಾರೆ. ಇದು ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಎತ್ತಿ ತೋರಿಸುತ್ತದೆ. ಅಂತಹ ನಕಲಿ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಸೇವನೆಯು ಜನರ ತೀವ್ರ ಮತ್ತು ದೀರ್ಘ ಕಾಲದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಹಾಗಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಪನೀರ್‌ ಉತ್ಪಾದನಾ ಸಂಸ್ಥೆಗಳು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ 2006ರ ಪ್ರಕಾರ ಆಹಾರ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವರಲ್ಲಿ ಮನವಿ ಮಾಡಿದ್ದಾರೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT