ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಸೇನಾ ಶಿಬಿರದಲ್ಲಿ ಭಾನುವಾರ ಬೆಳಗ್ಗೆ ಸೈನಿಕನೊಬ್ಬ ತನ್ನ ಸರ್ವೀಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಧರ್ಮುಂಡ್ ಮಿಲಿಟರಿ ಆಸ್ಪತ್ರೆಯಲ್ಲಿ ಸೆಂಟ್ರಿ ಕರ್ತವ್ಯದಲ್ಲಿದ್ದ 26ನೇ ರಾಷ್ಟ್ರೀಯ ರೈಫಲ್ಸ್ನ ಸಿಪಾಯಿ ವಿಜಯ್ ಕುಮಾರ್ ಅವರು ಇಂದು ಬೆಳಗಿನ ಜಾವ 3.40ಕ್ಕೆ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವರ ಆತ್ಮಹತ್ಯೆಯ ಹಿಂದಿನ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರಾಂಬನ್ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಯೋಧ ಆತ್ಮಹತ್ಯೆಅಧಿಕಾರಿಗಳ ಪ್ರಕಾರ, ಕುಮಾರ್ ರಾಜಸ್ಥಾನ ಮೂಲದವರಾಗಿದ್ದು, ಸುಮಾರು ಎರಡು ತಿಂಗಳ ರಜೆ ಪಡೆದ ನಂತರ ಮಾರ್ಚ್ 28 ರಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು.