ಕೇದಾರ್ ಜಾಧವ್ 
ದೇಶ

ಮುಂಬೈ: ಮಾಜಿ ಕ್ರಿಕೆಟಿಗ ಕೇದಾರ್ ಜಾಧವ್ ಬಿಜೆಪಿಗೆ ಸೇರ್ಪಡೆ

2014 ರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಾಯಕತ್ವದ ಬಿಜೆಪಿ ಸರ್ಕಾರದ ಸಾಧನೆಗಳಿಂದ ಪ್ರಭಾವಿತವಾಗಿರುವುದಾಗಿ ಹೇಳಿದರು.

ಮುಂಬೈ: ಭಾರತದ ಮಾಜಿ ಕ್ರಿಕೆಟ್ ಆಟಗಾರ ಕೇದಾರ್ ಜಾಧವ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂಬೈಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಜಾದವ್ ಕೇಸರಿ ಪಕ್ಷ ಸೇರಿಕೊಂಡರು. ಅವರಿಗೆ ಕೇಸರಿ ಶಾಲು ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಾವಂಕುಲೆ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಕೇದಾರ್ ಜಾಧವ್, 2014 ರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ನಾಯಕತ್ವದ ಬಿಜೆಪಿ ಸರ್ಕಾರದ ಸಾಧನೆಗಳಿಂದ ಪ್ರಭಾವಿತವಾಗಿರುವುದಾಗಿ ಹೇಳಿದರು.

ಬಿಜೆಪಿಗೆ ನನ್ನಿಂದ ಸಾಧ್ಯವಾದಷ್ಟು ಸಣ್ಣ ಕೊಡುಗೆಯನ್ನು ನೀಡುವುದು ನನ್ನ ಗುರಿ. ನನಗೆ ಯಾವುದೇ ಜವಾಬ್ದಾರಿ ಸಿಕ್ಕರೂ, ಅದನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಪೂರೈಸಲು ಪ್ರಯತ್ನಿಸುತ್ತೇನೆ ಎಂದರು.

ಕೇದಾರ್ ಜಾಧವ್ ಭಾರತದ ಪರ 73 ಏಕದಿನ ಮತ್ತು 9 ಟಿ20 ಅಂತಾರಾಷ್ಟ್ರೀಯ ಪಂದ್ಯ ಆಡಿದ್ದಾರೆ. ಈ ಅವಧಿಯಲ್ಲಿ, 2 ಶತಕ ಹಾಗೂ 6 ಅರ್ಧಶತಕ ಸೇರಿದಂತೆ 1,389 ರನ್‌ ಗಳಿಸಿದ್ದಾರೆ. 9 ಟಿ20 ಪಂದ್ಯಗಳಲ್ಲಿ ಕೇವಲ 122 ರನ್ ಗಳಿಸಿದ್ದಾರೆ.

ತಮ್ಮ ವಿಶಿಷ್ಠ ಬೌಲಿಂಗ್‌ ಶೈಲಿಯಿಂದಲೇ ಹೆಸರುವಾಸಿಯಾದ ಕೇದಾರ್ ಜಾಧವ್, 27 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಪರ ಆಡಿದ್ದಾರೆ. ಕೇದಾರ್ ಜಾಧವ್ ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟಿನಿಂದ ನಿವೃತ್ತರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT