ಸುಪ್ರೀಂ ಕೋರ್ಟ್  
ದೇಶ

ವಕ್ಫ್ ಕಾಯ್ದೆ ವಿರುದ್ಧ ಅರ್ಜಿ: ಸುಪ್ರೀಂ ಕೋರ್ಟ್ ಗೆ ಕೇವಿಯಟ್ ಸಲ್ಲಿಸಿದ ಕೇಂದ್ರ, ಏಪ್ರಿಲ್ 15ಕ್ಕೆ ವಿಚಾರಣೆ ಸಾಧ್ಯತೆ

ವಕ್ಫ್ (ತಿದ್ದುಪಡಿ) ಕಾಯ್ದೆಗೆ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದು, ಇಂದಿನಿಂದ ಹೊಸ ಕಾಯ್ದೆ ಜಾರಿಗೆ ಬರಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆ, 2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹಲವು ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 15 ರಂದು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಈ ಮಧ್ಯೆ, ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ್ದು, ವಕ್ಫ್ ಕಾಯ್ದೆ ವಿಚಾರದಲ್ಲಿ ಯಾವುದೇ ಆದೇಶ ಹೊರಡಿಸುವ ಮುನ್ನ ವಿಚಾರಣೆ ನಡೆಸುವಂತೆ ಕೋರಿದೆ.

ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಯಾವುದೇ ಅರ್ಜಿಯ ಬಗ್ಗೆ ವಿಚಾರಣೆ ಮಾಡದೆ ಯಾವುದೇ ಆದೇಶ ಹೊರಡಿಸದಂತೆ ನೋಡಿಕೊಳ್ಳಲು ಕೇವಿಯಟ್ ಅನ್ನು ಸಲ್ಲಿಸಲಾಗುತ್ತದೆ.

ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆಗೆ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದು, ಇಂದಿನಿಂದ ಹೊಸ ಕಾಯ್ದೆ ಜಾರಿಗೆ ಬರಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಇಂದು ಅಧಿಸೂಚನೆ ಹೊರಡಿಸಿದೆ.

ಹೊಸದಾಗಿ ಜಾರಿಗೆ ತಂದಿರುವ ವಕ್ಫ್ (ತಿದ್ದುಪಡಿ) ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ರಾಜಕಾರಣಿಗಳು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(AIMPLB) ಮತ್ತು ಜಮಿಯತ್ ಉಲಮಾ-ಇ-ಹಿಂದ್ ಸೇರಿದಂತೆ 10ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿವೆ.

ಈ ಬೆಳವಣಿಗೆ ಬಗ್ಗೆ ಮಾಹಿತಿ ಹೊಂದಿರುವ ವಕೀಲರು, ಅರ್ಜಿಗಳನ್ನು ಏಪ್ರಿಲ್ 15 ರಂದು ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಏಪ್ರಿಲ್ 7 ರಂದು, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಜಮಿಯತ್ ಉಲಮಾ-ಇ-ಹಿಂದ್ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ಅರ್ಜಿಗಳನ್ನು ಪಟ್ಟಿ ಮಾಡುವುದನ್ನು ಪರಿಗಣಿಸುವುದಾಗಿ ಭರವಸೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

'ಅಶ್ಲೀಲ, ಅಸಭ್ಯ, ವಿಕೃತಿ': TVK ಮಹಿಳಾ ಅಭ್ಯರ್ಥಿ ಕುರಿತ ಸ್ಟಾಲಿನ್ ಹೇಳಿ ಖಂಡಿಸಿದ CM ವಿಜಯ್; ಚುನಾವಣಾ ಆಯೋಗಕ್ಕೆ ದೂರು

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video