ತೇಜಸ್ವಿ ಯಾದವ್ 
ದೇಶ

ಬಿಹಾರ ಚುನಾವಣೆ: ಮಹಾಘಟಬಂಧನ್ ಸಿಎಂ ಅಭ್ಯರ್ಥಿ ನಾನೇ; ತೇಜಸ್ವಿ ಯಾದವ್ ಸ್ವಯಂ ಘೋಷಣೆ!

ಮುಖ್ಯಮಂತ್ರಿಯಾದ ನಂತರ ಪಕ್ಕಾ ಮನೆಗಳನ್ನು ನಿರ್ಮಿಸಲು ಭೂಮಿ ಒದಗಿಸುವುದಾಗಿ ಮತ್ತು ಬಡವರಿಗೆ ಉದ್ಯೋಗಗಳನ್ನು ಒದಗಿಸುವುದಾಗಿ ಆರ್‌ಜೆಡಿ ನಾಯಕ ಹೇಳಿದರು.

ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಪಾದಿಸಿದ ಒಂದು ದಿನದ ನಂತರ, ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಮಂಗಳವಾರ ರಾಜ್ಯದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಮಹಾಘಟಬಂಧನ್ ಅಥವಾ ಮಹಾಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತಾನೇ ಎಂದು ಘೋಷಿಸಿಕೊಂಡಿದ್ದಾರೆ.

ರಾಜ್ಯ ರಾಜಧಾನಿಯಲ್ಲಿ 'ಮುಸಾಹರ್-ಭುಯಾ ಮಹಾ ರ್ಯಾಲಿ' ಉದ್ದೇಶಿ ಮಾತನಾಡಿದ ತೇಜಸ್ವಿ, ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ಮತ್ತು ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ, ಸಮಾಜದ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರು ಮೈ-ಬೆಹನ್ ಸಮ್ಮಾನ್ ಯೋಜನೆಯಡಿ ಪ್ರಯೋಜನೆ ಪಡೆಯುತ್ತಾರೆ ಎಂದು ಹೇಳಿದರು.

ಮುಖ್ಯಮಂತ್ರಿಯಾದ ನಂತರ ಪಕ್ಕಾ ಮನೆಗಳನ್ನು ನಿರ್ಮಿಸಲು ಭೂಮಿ ಒದಗಿಸುವುದಾಗಿ ಮತ್ತು ಬಡವರಿಗೆ ಉದ್ಯೋಗಗಳನ್ನು ಒದಗಿಸುವುದಾಗಿ ಆರ್‌ಜೆಡಿ ನಾಯಕ ಹೇಳಿದರು.

"ನಾನು ಮುಖ್ಯಮಂತ್ರಿಯಾದರೆ, ನಿಮಗೆ ನೀಡಿದ ಭರವಸೆಗಳನ್ನು ಈಡೇರಿಸುವುದು ಖಚಿತ. ನಾನು(ಮುಖ್ಯಮಂತ್ರಿ ನಿತೀಶ್ ಕುಮಾರ್‌ಗಿಂತ) ಚಿಕ್ಕವನಾಗಿದ್ದರೂ, ನನ್ನ ಮಾತುಗಳಿಗೆ ಬದ್ಧನಾಗಿರುತ್ತೇನೆ" ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದರು.

ಈ ಹಿಂದೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಯುವಕರಿಗೆ ಐದು ಲಕ್ಷ ಉದ್ಯೋಗ ನೀಡಿರುವುದಾಗಿ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹೇಳಿದರು.

"ನೇಮಕಾತಿಯ ಬಾಗಿಲುಗಳು ಈಗ ತೆರೆದಿವೆ. ಮಹಾಘಟಬಂಧನ್ ಸರ್ಕಾರದ ಅವಧಿಯಲ್ಲಿ ಪ್ರಾರಂಭವಾದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ಈ ಪ್ರಾರಂಭಿಸಿದೆ" ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT