ಶರೀಫುಲ್ ಇಸ್ಲಾಂ - ಸೈಫ್ ಅಲಿ ಖಾನ್ TNIE
ದೇಶ

ಸೈಫ್ ಅಲಿ ಖಾನ್ ಮೇಲೆ ದಾಳಿ; 3 ತಿಂಗಳ ನಂತರ ಚಾರ್ಜ್‌ಶೀಟ್ ಸಲ್ಲಿಸಿದ ಮುಂಬೈ ಪೊಲೀಸರು!

ಬಾಂದ್ರಾ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಆರೋಪಿ ಬಾಂಗ್ಲಾದೇಶಿ ಪ್ರಜೆ ಮೊಹಮ್ಮದ್ ಶರೀಫುಲ್ ಇಸ್ಲಾಂ ವಿರುದ್ಧ ಸಾಕ್ಷ್ಯಗಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ: ಜನವರಿಯಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆದ ಪ್ರಕರಣದಲ್ಲಿ ಪೊಲೀಸರು ಮುಂಬೈ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಬಾಂದ್ರಾ ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಆರೋಪಿ ಬಾಂಗ್ಲಾದೇಶಿ ಪ್ರಜೆ ಮೊಹಮ್ಮದ್ ಶರೀಫುಲ್ ಇಸ್ಲಾಂ ವಿರುದ್ಧ ಸಾಕ್ಷ್ಯಗಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನವರಿ 16ರಂದು ಬಾಂದ್ರಾ ಪ್ರದೇಶದ ಐಷಾರಾಮಿ ಆಪಾರ್ಟ್‌ಮೆಂಟಿನ 12ನೇ ಮಹಡಿಯಲ್ಲಿರುವ 54 ವರ್ಷದ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ಆರೋಪಿ ಸೈಫ್ ಮೇಲೆ ಚಾಕುವಿನಿಂದ ದಾಳಿ ಮಾಡಿ ಪರಾರಿಯಾಗಿದ್ದ. ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೈಫ್, ಐದು ದಿನಗಳ ನಂತರ ಬಿಡುಗಡೆಯಾಗಿದ್ದರು.

ಜನವರಿ 19 ರಂದು, ಪೊಲೀಸರು ನೆರೆಯ ಥಾಣೆಯಲ್ಲಿ ಶರೀಫುಲ್ ಇಸ್ಲಾಂ (30) ಎಂಬಾತನನ್ನು ಬಂಧಿಸಿ ಕರೆತಂದಿದ್ದರು.

ದಾಳಿಯ ಸಮಯದಲ್ಲಿ ನಟನ ಬೆನ್ನುಮೂಳೆಗೆ ಸಿಲುಕಿದ್ದ ಚಾಕುವಿನ ತುಣುಕು ಮತ್ತು ಅಪರಾಧದ ಸ್ಥಳದಲ್ಲಿ ದೊರೆತ ಒಂದು ಭಾಗವು ಆರೋಪಿಯಿಂದ ವಶಪಡಿಸಿಕೊಂಡ ಆಯುಧಕ್ಕೆ ಹೊಂದಿಕೆಯಾಗುತ್ತದೆ ಎಂದು ಪೊಲೀಸರು ಕಳೆದ ವಾರ ಇಲ್ಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಆರೋಪಿಯ ಜಾಮೀನು ಅರ್ಜಿಯನ್ನು ವಿರೋಧಿಸುತ್ತಾ ಪೊಲೀಸರು, ಅಪರಾಧವು ತುಂಬಾ ಗಂಭೀರ ಸ್ವರೂಪದ್ದಾಗಿದೆ ಮತ್ತು ಆರೋಪಿ ವಿರುದ್ಧ ಬಲವಾದ ಪುರಾವೆಗಳು ಲಭ್ಯವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ ‘ವಿಶ್ವಾಸಾರ್ಹ ಪಾಲುದಾರಿಕೆ’ ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಮಹತ್ವದ ಕರೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

SCROLL FOR NEXT