(ಬಲಗಡೆಯಿಂದ) ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ನಿರ್ಗಮಿತ ಅಧ್ಯಕ್ಷ ಕೆ ಅಣ್ಣಾಮಲೈ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪ ಪ್ರಧಾನ ಕಾರ್ಯದರ್ಶಿ ಕೆ ಪಿ ಮುನುಸ್ವಾಮಿ ಮತ್ತು ಎಸ್ ಪಿ ವೇಲುಮಣಿ ಇದ್ದಾರೆ. 
ದೇಶ

ತಮಿಳುನಾಡು ಚುನಾವಣೆಗೆ AIADMK-BJP ಮೈತ್ರಿ; ಇಪಿಎಸ್ ನೇತೃತ್ವ: ಅಮಿತ್ ಶಾ ಘೋಷಣೆ

2026ರಲ್ಲಿ ತಮಿಳುನಾಡಿನಲ್ಲಿ ಎನ್ ಡಿಎ ಸರ್ಕಾರ ರಚನೆಯಾಗಲಿದೆ ಎಂದು ಅಮಿತ್ ಶಾ ವಿಶ್ವಾಸ.

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸಲು ತಮ್ಮ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಶುಕ್ರವಾರ ಘೋಷಿಸಿದ್ದಾರೆ.

2026ರಲ್ಲಿ ತಮಿಳುನಾಡಿನಲ್ಲಿ ಎನ್ ಡಿಎ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಮಿತ್ ಶಾ, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎನ್ ಡಿಎ ಮೈತ್ರಿಕೂಟದ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದರು.

ಉಚ್ಚಾಟಿತ ಎಐಎಡಿಎಂಕೆ ನಾಯಕರಾದ ಓ ಪನ್ನೀರ್ಸೆಲ್ವಂ ಮತ್ತು ಎಎಂಎಂಕೆ ನಾಯಕ ಟಿಟಿವಿ ದಿನಕರನ್ ಅವರನ್ನು ಮೈತ್ರಿಕೂಟದಲ್ಲಿ ಸೇರಿಸಿಕೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, ಬಿಜೆಪಿ, ಎಐಎಡಿಎಂಕೆಯ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.

ಈ ಮೈತ್ರಿಕೂಟವು ಪರಸ್ಪರ ಹಿತಾಸಕ್ತಿಯಿಂದ ಹುಟ್ಟಿಕೊಂಡಿದೆ ಮತ್ತು ಎರಡೂ ಪಕ್ಷಗಳು ಈ ಹಿಂದೆ ಒಟ್ಟಿಗೆ ಚುನಾವಣೆ ಎದುರಿಸಿದ್ದವು ಎಂದು ಅಮಿತ್ ಶಾ ನೆನಪಿಸಿಕೊಂಡರು.

ಪಳನಿಸ್ವಾಮಿ, ಹಿರಿಯ ಎಐಎಡಿಎಂಕೆ ನಾಯಕರಾದ ಕೆಪಿ ಮುನುಸಾಮಿ ಮತ್ತು ಎಸ್‌ಪಿ ವೇಲುಮಣಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮತ್ತು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನೈನಾರ್ ನಾಗೇಂದ್ರನ್ ಕೂಡ ಮೈತ್ರಿ ಘೋಷಣೆಯ ಸಮಯದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT