ಸಾಂದರ್ಭಿಕ ಚಿತ್ರ 
ದೇಶ

ನವದೆಹಲಿ: ಕಾಮತೃಷೆಗೆ ಬೀದಿ ನಾಯಿ ಮೇಲೆರಗಿದ ಕಾಮುಕನ ಬಂಧನ!

ಏಪ್ರಿಲ್ 7 ರಂದು ಈ ಘಟನೆ ನಡೆದಿದೆ. ಪ್ರಾಣಿ ದಯಾ ಸಂಘದ ಸದಸ್ಯೆ ರೇಣು ಎಂಬುವರು ನೀಡಿದ ದೂರಿನ ನಂತರ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಮನುಷ್ಯ ಕಾಮತೃಷೆ ತೀರಿಸಿಕೊಳ್ಳಲು ಬೀದಿನಾಯಿಗಳನ್ನು ಬಿಡುತ್ತಿಲ್ಲ. ಹೌದು. ಇಂತಹ ವಿಲಕ್ಷಣಕಾರಿ ಘಟನೆಯೊಂದು ರಾಷ್ಟ್ರ ರಾಜಧಾನಿ ಶಾಹದಾರ ಪ್ರದೇಶದಲ್ಲಿ ನಡೆದಿದೆ. ಬೀದಿ ನಾಯಿಯೊಂದಕ್ಕೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ 36 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಏಪ್ರಿಲ್ 7 ರಂದು ಈ ಘಟನೆ ನಡೆದಿದೆ. ಪ್ರಾಣಿ ದಯಾ ಸಂಘದ ಸದಸ್ಯೆ ರೇಣು ಎಂಬುವರು ನೀಡಿದ ದೂರಿನ ನಂತರ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 7 ರಂದು ರಾತ್ರಿ 10 ಗಂಟೆಯ ಸುಮಾರಿಗೆ ಕೈಲಾಶ್ ನಗರದ ನಾಲಾ ಪ್ರದೇಶದ ಸ್ಟ್ರೀಟ್ ನಂ. 15 ರ ಬಳಿ ವ್ಯಕ್ತಿಯೊಬ್ಬ ಬೀದಿನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಅವರು ಆರೋಪಿಸಿರುವುದಾಗಿ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 325 (ಪ್ರಾಣಿಗಳನ್ನು ಕೊಲ್ಲುವ ಅಥವಾ ಅಂಗವಿಕಲಗೊಳಿಸುವ ಮೂಲಕ ದುಷ್ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಧಿ ಮೊಹಲ್ಲಾ ಗಾಂಧಿ ನಗರದ ನಿವಾಸಿ ನೌಶಾದ್ ಎಂಬಾತನನ್ನು ಬಂಧಿಸಲಾಗಿದೆ

ಈತ ಆ ಪ್ರದೇಶದಲ್ಲಿ ನೀರು ಸರಬರಾಜುದಾರನಾಗಿ ಕೆಲಸ ಮಾಡುತ್ತಿದ್ದ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ವಿಚಾರಣೆ ವೇಳೆ ನೌಶಾದ್ ಒಪ್ಪಿಕೊಂಡಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!